/newsfirstlive-kannada/media/post_attachments/wp-content/uploads/2024/08/TEMPLE-2.jpg)
ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಹೃದಯ ವಿದ್ರಾವಕ ಘಟನೆ ನಡೆದಿದೆ. ದೇವಸ್ಥಾನದ ಗೋಡೆ ಕುಸಿದು 9 ಮಕ್ಕಳು ಸಾವನ್ನಪ್ಪಿದ್ದಾರೆ.
ಶಹಪುರದ ಹರ್ದುಲ್ ಬಾಬಾ ಟೆಂಪಲ್ನಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದಾಗ ದುರ್ಘಟನೆ ನಡೆದಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಹಾಗೂ ಸ್ಥಳೀಯರು ಮಕ್ಕಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮೃತರೆಲ್ಲ 10 ರಿಂದ 15 ವರ್ಷದೊಳಗಿನ ಮಕ್ಕಳು ಎಂದು ತಿಳಿದುಬಂದಿದೆ. ದುರಂತಕ್ಕೆ ಮುಖ್ಯಮಂತ್ರಿ ಮೋಹನ್ ಯಾದವ್ ಕಂಬನಿ ಮಿಡಿದಿದ್ದಾರೆ. ಮೃತರ ಕುಟುಂಬಕ್ಕೆ ತಲಾ 4 ಲಕ್ಷ ಪರಿಹಾರ ನೀಡೋದಾಗಿ ಘೋಷಣೆ ಮಾಡಿದ್ದಾರೆ. ವರದಿಗಳ ಪ್ರಕಾರ, ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯಿಂದ ದೇವಾಲಯದ ಗೋಡೆ ನೀರಲ್ಲಿ ನೆನೆದು ನಿಂತಿತ್ತು ಎನ್ನಲಾಗಿದೆ.
ಇದನ್ನೂ ಓದಿ:ರೋಹಿತ್ಗೆ ಬೇಕಿತ್ತು ಪಂತ್.. ರಾಹುಲ್ಗೆ ಚಾನ್ಸ್ ಸಿಕ್ಕಿರುವ ಹಿಂದಿದೆ ಓರ್ವ ಸೂತ್ರಧಾರನ ಕೈವಾಡ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ