/newsfirstlive-kannada/media/post_attachments/wp-content/uploads/2025/06/TRIVENI-SANGAMA-3.jpg)
ಕೊಡಗು ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದೆ.. ತೀವ್ರ ಮಳೆಗೆ ಮಡಿಕೇರಿ ತಾಲೂಕಿನ ಭಾಗಮಂಡಲದ ತ್ರಿವೇಣಿ ಸಂಗಮ ಮುಳುಗಡೆಯಾಗಿದೆ..
ಬ್ರಹ್ಮಗಿರಿ ಬೆಟ್ಟ, ತಲಕಾವೇರಿ ವ್ಯಾಪ್ತಿಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಕಾವೇರಿ, ಕನ್ನಿಕೆ ಸುಜ್ಯೋತಿ ನದಿಗಳು ನದಿಗಳು ತುಂಬಿ ಹರಿಯುತ್ತಿವೆ. ಇನ್ನು, ತ್ರಿವೇಣಿ ಸಂಗಮದಲ್ಲಿ ಹೊಸದಾಗಿ ನಿರ್ಮಾಣ ಮಾಡಿರುವ ಉದ್ಯಾನವನ ಸಂಪೂರ್ಣ ಮುಳುಗಡೆ ಆಗಿದೆ..
ಇದೇ ರೀತಿ ಮಳೆ ಮುಂದುವರಿದಲ್ಲಿ ಭಗಂಡೇಶ್ವರ ದೇವಾಲಯದ ಮುಂಭಾಗದ ಆವರಣಕ್ಕೂ ನೀರು ನುಗ್ಗುವ ಸಾಧ್ಯತೆ ಇದೆ.
ಇದನ್ನೂ ಓದಿ: ಇನ್ಮೇಲೆ ಈ ನಟಿಯರದ್ದೇ ದರ್ಬಾರ್; ಮಹಾನಟಿ ಸೀಸನ್ 2ಗೆ ಯಾರೆಲ್ಲಾ ಆಯ್ಕೆ?
ಯಾಕೆಂದರೆ ಕಾವೇರಿ ಕನ್ನಿಕೆ ಸುಜ್ಯೋತಿ ನದಿಗಳ ನೀರಿನ ಮಟ್ಟ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಿದೆ. ನಾಪೋಕ್ಲು ಭಾಗಮಂಡಲ ರಸ್ತೆ ಮೇಲೆ ಸಣ್ಣ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಇದೇ ರೀತಿ ಮಳೆಯಾದರೆ, ನಾಪೋಕ್ಲು ಅಯ್ಯಗೇರಿ, ಬಾಗಮಂಡಲ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇದೆ.
ಇನ್ನು ಮಡಿಕೇರಿ ತಾಲೂಕಿನ ಹೋದವಾಡ ಗ್ರಾಮದಲ್ಲಿ ದನದ ಕೊಟ್ಟಿಗೆ ಕುಸಿದಿದೆ. ಗ್ರಾಮದ ನಿವಾಸಿ ಬಿ.ಬಿ.ದರ್ನಪ್ಪ ಅನ್ನೋರ ಕೊಟ್ಟಿಗೆ ಕುಸಿದೆ. ಪರಿಣಾಮ ಜಾನುವಾರುಗಳಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಹೊದ್ದೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಚಂದ್ರಶೇಖರ್ ಹಾಗೂ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಕ್ರಿಕೆಟ್ ಆಟದ ವೇಳೆ ವಿರಾಟ್ ಕೊಹ್ಲಿ ತಿನ್ನುವ ಚಾಕೊಲೇಟ್ ಬೆಲೆ ಎಷ್ಟು?
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ