/newsfirstlive-kannada/media/post_attachments/wp-content/uploads/2025/01/KUMBHA.jpg)
ಲಕ್ನೋ: ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ 2025ರ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿ 15 ಭಕ್ತರು ಜೀವ ಕಳೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಹೆಚ್ಚಿನ ಭಕ್ತರು ಮಹಾ ಕುಂಭಮೇಳಕ್ಕೆ ಭೇಟಿ ನೀಡುತ್ತಿದ್ದಾರೆ. ಇದರಿಂದ ಪ್ರಯಾಗ್ರಾಜ್ನ ಸಂಗಮ್ ಪ್ರದೇಶದಲ್ಲಿ ರಾತ್ರಿ 2 ಗಂಟೆ ಸುಮಾರಿಗೆ ಏಕಾಏಕಿ ಜನರು ನುಗ್ಗಿಕೊಂಡು ಬಂದಿದ್ದರಿಂದ ಕಾಲ್ತುಳಿತ ಸಂಭವಿಸಿದೆ. ಈ ಘಟನೆಯಲ್ಲಿ ಸುಮಾರು 15 ಜನರು ಜೀವ ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ಇಂದು ಮೌನಿ ಅಮಾವಾಸ್ಯೆ; ಮಹಾ ಕುಂಭಮೇಳದಲ್ಲಿ ಅಮೃತಸ್ನಾನಕ್ಕಾಗಿ ಕೋಟ್ಯಂತರ ಭಕ್ತರು: ಭದ್ರತೆ ಹೇಗಿರುತ್ತೆ?
ಇದರ ಜೊತೆಗೆ ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಹಲವಾರು ಜನರು ತಮ್ಮ ತಮ್ಮ ಸಂಬಂಧಿಗಳನ್ನು ಕಳೆದುಕೊಂಡು ದುಃಖಿಸುತ್ತಿದ್ದಾರೆ. ಜನರು ಏಕಾಏಕಿ ನುಗ್ಗಿಕೊಂಡು ಬಂದಿದ್ದರಿಂದ ತಮ್ಮವರು ನಾಪತ್ತೆ ಆಗಿದ್ದಾರೆ ಎಂದು ಕೆಲವರು ಅಳುತ್ತ ದೂರು ಹೇಳುತ್ತಿದ್ದಾರೆ. ಪೊಲೀಸರು ಈ ಬಗ್ಗೆ ಕ್ರಮ ತೆಗೆದುಕೊಂಡಿದ್ದು ಪ್ರಯಾಗ್ರಾಜ್ ಕಡೆಗೆ ತೆರಳುವ ವಾಹನಗಳನ್ನು ಕೆಲ ಸಮಯ ತಡೆದಿದ್ದಾರೆ ಎಂದು ಹೇಳಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ