/newsfirstlive-kannada/media/post_attachments/wp-content/uploads/2024/06/MH_FAMILY.jpg)
ಮುಂಬೈ: ಪಿಕ್ನಿಕ್‌ಗೆ ಬಂದಿದ್ದ ಒಂದೇ ಕುಟುಂಬದ ಓರ್ವ ಮಹಿಳೆ ಹಾಗೂ ನಾಲ್ವರು ಮಕ್ಕಳು ಜಲಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಈಗಾಗಲೇ 2 ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಪುಣೆಯ ಲೋನಾವಾಲಾ ಪ್ರದೇಶದ ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪದ ಜಲಪಾತದಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ:25ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸಾರಿಗೆ ಬಸ್ ಪಲ್ಟಿ.. ಡ್ರೈವರ್ ಸೇರಿ ಮೂವರು ಗಂಭೀರ; ಆಕ್ಸಿಡೆಂಟ್ ಆಗಿದ್ದೇಗೆ?
ಪುಣೆಯ ಸಯ್ಯದ್ ನಗರಕ್ಕೆ ಸೇರಿದ ಒಂದೇ ಕುಟುಂಬದ 5 ಜನರು ಮೃತಪಟ್ಟಿದ್ದಾರೆ. ಇವರೆಲ್ಲ ಪಿಕ್ನಿಕ್‌ಗೆ ಎಂದು ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪದ ಜಲಪಾತಕ್ಕೆ ಬಂದಿದ್ದರು. ಈ ವೇಳೆ ನೀರಿನಲ್ಲಿ ಈಜಾಡುವಾಗ ಜಾರಿ ಜಲಪಾತಕ್ಕೆ ಬಿದ್ದಿದ್ದಾರೆ. ಪರಿಣಾಮ ಮೇಲಿನಿಂದ ಬಿದ್ದ ರಭಸಕ್ಕೆ ಎಲ್ಲರು ಸಾವನ್ನಪ್ಪಿದ್ದಾರೆ. ಸದ್ಯ ನೀರಲ್ಲಿ ಮುಳುಗಿ ಸಾವನ್ನಪ್ಪಿದವರಿಗಾಗಿ ಹುಡುಕಾಟ ನಡೆಸಲಾಗುತ್ತಿದ್ದು 2 ಮೃತದೇಹಗಳನ್ನು ಈಗಾಗಲೇ ಹೊರ ತೆಗೆಯಲಾಗಿದೆ. ಇನ್ನುಳಿದ ಶವಗಳನ್ನು ಪತ್ತೆ ಹಚ್ಚಲು ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಕಾಲೇಜು ಮುಂಭಾಗ ಸ್ಕಿಡ್ ಆಗಿ ಬಿದ್ದ ಬೈಕ್.. ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು, ಯುವಕ ಗಂಭೀರ
पोरांनो, दरवर्षी पाऊस पडतो, धबधबे वाहतात.. हे जीवन एकदाच मिळते. बेजबाबदार वागून आपले आपला जीव धोक्यात घालू नका रे. केवढ्याला पडले रे हे सगळे.. काळजी घ्या रे!! #bhushi#dam#lonavala@mataonlinepic.twitter.com/bpDM7oqTw8
— Prashant Aher (@PrashantAherMT)
पोरांनो, दरवर्षी पाऊस पडतो, धबधबे वाहतात.. हे जीवन एकदाच मिळते. बेजबाबदार वागून आपले आपला जीव धोक्यात घालू नका रे. केवढ्याला पडले रे हे सगळे.. काळजी घ्या रे!! #bhushi#dam#lonavala@mataonlinepic.twitter.com/bpDM7oqTw8
— Prashant Aher (@PrashantAherMT) June 30, 2024
">June 30, 2024
ಭೂಶಿ ಅಣೆಕಟ್ಟು ಹಿನ್ನೀರಿನ ಸಮೀಪದ ಜಲಪಾತ ಜನಪ್ರಿಯ ಪ್ರವಾಸಿ ತಾಣವಾಗಿದೆ. ಅದರಲ್ಲಿ ವಿಶೇಷವಾಗಿ ಮಾನ್ಸೂನ್ ಅವಧಿಯಲ್ಲಿ ಇಲ್ಲಿನ ಪ್ರಕೃತಿ ನೋಟ ಅದ್ಭುತವಾಗಿರುತ್ತದೆ. ಹೀಗಾಗಿ ಕುಟುಂಬ ಸಮೇತ ಜನರು ವಾರಂತ್ಯದಲ್ಲಿ ಇಲ್ಲಿಗೆ ಬರುವುದು ಸಾಮಾನ್ಯ. ಇದೇ ರೀತಿ ಪಿಕ್ನಿಕ್‌ಗೆ ಎಂದು ಪುಣೆಯ ಸಯ್ಯದ್ ನಗರದಿಂದ ಬಂದಿದ್ದ ಒಂದೇ ಕುಟುಂಬದ ಐವರು ನೀರು ಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ