/newsfirstlive-kannada/media/post_attachments/wp-content/uploads/2024/11/Maharastra_News.jpg)
ಮುಂಬೈ: ಇತ್ತೀಚೆಗೆ ನಡೆದ ಬಹುನಿರೀಕ್ಷಿತ 2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಈಗಾಗಲೇ ಶುರುವಾಗಿದೆ. ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಶುರುವಾಗಿದ್ದು, ಭರ್ಜರಿ ಬಹುಮತದತ್ತ ಮಹಾಯುತಿ ಸಾಗಿದೆ ಎನ್ನುವ ಮಾಹಿತಿ ಇದೆ.
ಸದ್ಯಕ್ಕೆ ಸಿಕ್ಕಿರೋ ಮಾಹಿತಿ ಪ್ರಕಾರ ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಅಧಿಕಾರ ಬರುವುದು ಬಹುತೇಕ ಖಚಿತವಾಗಿದೆ. ಭರ್ಜರಿ ಲೀಡ್ನಲ್ಲಿರೋ ಮಹಾಯುತಿ 215ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ನಾಯಕತ್ವದ ಎಂವಿಎ ಕೇವಲ 60ರಲ್ಲಿ ಮಾತ್ರ ಮುನ್ನೆಡೆ ಕಾಯ್ದುಕೊಂಡಿದೆ.
ಆರಂಭದಲ್ಲಿ ಭರ್ಜರಿ ಪೈಪೋಟಿ
288 ಅಸೆಂಬ್ಲಿ ಸ್ಥಾನಗಳಿಗೆ ನಡೆದ ಚುನಾವಣೆ ಇದಾಗಿತ್ತು. ಮತ ಎಣಿಕೆ ಆರಂಭದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮತ್ತು ಕಾಂಗ್ರೆಸ್ ನೇತೃತ್ವದ ಮಹಾವಿಕಾಸ್ ಅಘಾಡಿ ಮಧ್ಯೆ ಭಾರೀ ಸ್ಪರ್ಧೆ ಏರ್ಪಟ್ಟಿತ್ತು. ಮಹತ್ವದ ಬೆಳವಣಿಗೆಯಲ್ಲಿ ದಿಢೀರ್ ಮಹಾಯುತಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದು, ಈಗಾಗಲೇ ಮ್ಯಾಜಿಕ್ ನಂಬರ್ ದಾಟಿದೆ. ಟ್ರೆಂಡ್ ಮಹಾಯುತಿ ಪರ ಇದ್ರೂ ಮುಂದೆ ಈ ನಂಬರ್‌ಗಳಲ್ಲಿ ಏರಿಳಿತ ಆಗುವ ಸಾಧ್ಯತೆ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ