/newsfirstlive-kannada/media/post_attachments/wp-content/uploads/2023/12/tushar-girinatha.jpg)
ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಅಲ್ಲದೇ ಅವರಿಗೆ ಬಿಬಿಎಂಪಿ ಆಡಳಿತಾಧಿಕಾರಿ ಹಾಗೂ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ತುಷಾರ್ ಗಿರಿನಾಥ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ:NIAಗೆ ಸಖತ್ ಕ್ಲೂ ಕೊಟ್ಟ ಅದೊಂದು ವಿಡಿಯೋ, ಪಹಲ್ಗಾಮ್ ದಾಳಿ ತನಿಖೆಗೆ ಬಿಗ್ ಟ್ವಿಸ್ಟ್..!
ಇನ್ನು, ಬಿಎಂಆರ್‌ಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕ ಎಂ.ಮಹೇಶ್ವರ್ ರಾವ್ ಅವರಿಗೆ ಬಿಬಿಎಂಪಿಯ ಮುಖ್ಯ ಆಯುಕ್ತರ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಈ ಹಿಂದೆ ಎಂ.ಮಹೇಶ್ವರ್ ರಾವ್ ಅವರು BMRCL ಎಂಡಿ ಆಗಿದ್ದರು. ಇದೀಗ ಪಾಲಿಕೆ ಮುಖ್ಯ ಆಯುಕ್ತರಾಗಿ ಎಂದು ಜವಾಬ್ದಾರಿ ನೀಡಲಾಗಿದೆ.
ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಎಸಿಎಸ್) ಎಸ್.ಆರ್.ಉಮಾಶಂಕರ್ ಏ.30ಕ್ಕೆ ನಿವೃತ್ತಿಯಾಗುತ್ತಿದ್ದು, ಆ ಹುದ್ದೆಗೆ ತುಷಾರ್ ಗಿರಿನಾಥ್ ನೇಮಕ ಮಾಡಲಾಗಿದೆ. ಜತೆಗೆ ಬಿಬಿಎಂಪಿಯ ಆಡಳಿತಾಧಿಕಾರಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ತುಷಾರ್ ಗಿರಿನಾಥ್ ಅವರಿಗೆ ವಹಿಸಲಾಗಿದೆ. ತುಷಾರ್ ಗಿರಿನಾಥ್ ಕಳೆದ ಎರಡೂವರೆ ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ. ಈಗ ಬಿಬಿಎಂಪಿಯ ಆಡಳಿತಾಧಿಕಾರಿ ಹುದ್ದೆಯ ಹೆಚ್ಚುವರಿ ಕೆಲಸವನ್ನು ಇವರಿಗೆ ವಹಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ