ಸಿನಿಮಾ ಥಿಯೇಟರ್ ಕಡೆಯಿಂದ ಹೊತ್ತಿಕೊಂಡಿತಾ ಬೆಂಕಿ?
ಮುನ್ಸಿಪಲ್ ಕಾರ್ಪೊರೇಷನ್ ನಡೆಸುತ್ತಿದ್ದ ಪಾರ್ಕಿಂಗ್ನಲ್ಲಿ ಬೆಂಕಿ
ಬೆಂಕಿ ತಗುಲಿ ಸುಟ್ಟು ಹೋಗಿರುವ ವಾಹನದ ಮಾಲೀಕರು ಬೇಸರ
ಮುಂಬೈ: ಮುನ್ಸಿಪಲ್ ಕಾರ್ಪೊರೇಷನ್ ನಡೆಸುತ್ತಿರುವ ಪಾರ್ಕಿಂಗ್ ಏರಿಯಾದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು 16 ಕಾರು, 2 ಬೈಕ್ಗಳು ಸುಟ್ಟು ಕರಕಲಾಗಿವೆ. ಈ ಘಟನೆಯು ಮುಂಬೈನ ದಾದರ್ ಪ್ರದೇಶದಲ್ಲಿ ರಾತ್ರಿ ವೇಳೆ ನಡೆದಿದೆ.
ಬೆಂಕಿಯಿಂದಾಗಿ ವಾಹನಗಳೆಲ್ಲ ಸಂಪೂರ್ಣವಾಗಿ ಸುಟ್ಟು ಹೋಗಿವೆ. ಈ ವೇಳೆ ಪಾರ್ಕಿಂಗ್ ಏರಿಯಾ ಎಲ್ಲ ಫುಲ್ ಹೊಗೆಯಿಂದ ತುಂಬಿಕೊಂಡಿತ್ತು. ಇನ್ನೂ, ರಾತ್ರಿ ವಾಹನಗಳಿಗೆ ಹೊತ್ತಿಕೊಂಡ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. 2 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಬಳಿಕ ಬೆಂಕಿಯು ಹತೋಟಿಗೆ ಬಂದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ನಡೆದಿಲ್ಲ. ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಕಿ ತಗುಲಿ ಸುಟ್ಟು ಹೋಗಿರುವ ವಾಹನದ ಮಾಲೀಕರು ಬೇಸರ ವ್ಯಕ್ತಪಡಿಸಿದ್ದಾರೆ. ಇದರಿಂದ ಕೋಟ್ಯಂತರ ರೂಪಾಯಿ ನಷ್ಟವಾಗಿದೆ ಎಂದು ಹೇಳಲಾಗಿದೆ. ಮುನ್ಸಿಪಲ್ ಕಾರ್ಪೊರೇಷನ್ ನಡೆಸುತ್ತಿರುವ ಪಾರ್ಕಿಂಗ್ ಪಕ್ಕದಲ್ಲಿ ಸಿನಿಮಾ ಥಿಯೇಟರ್ ಇದ್ದು ಇಲ್ಲಿಂದಲೆ ಮೊದಲು ಬೆಂಕಿ ಕಾಣಿಸಿಕೊಂಡು ಬಳಿಕ ವಾಹನಗಳಿಗೆ ತಗುಲಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ