‘UPA ಮೈತ್ರಿಕೂಟದ ಹೆಸರು ಬದಲಾವಣೆ ಮಾಡಿದ್ದೇವೆ’
‘ಮೈತ್ರಿಕೂಟಕ್ಕೆ INDIA ಎಂದು ಹೆಸರಿಟ್ಟಿದ್ದೇವೆ’- ಖರ್ಗೆ!
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಘೋಷಣೆ
ಬೆಂಗಳೂರು: ಇಂದು ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ನಡೆದ 26 ವಿಪಕ್ಷಗಳ ಸಭೆಯಲ್ಲಿ ಮಹತ್ವದ ನಿರ್ಧಾರವೊಂದು ತೆಗೆದುಕೊಳ್ಳಲಾಗಿದೆ. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, UPA ಮೈತ್ರಿಕೂಟದ ಹೆಸರು ಬದಲಿಸಿದ್ದೇವೆ. ನಮ್ಮ ಮೈತ್ರಿಕೂಟ ಇನ್ಮುಂದೆ INDIA ಆಗಿದ್ದು, ಇದರ ಪೂರ್ಣ ಸ್ವರೂಪವನ್ನು ಇಂಡಿಯನ್ ನ್ಯಾಷನಲ್ ಡೆವಲಪ್ಮೆಂಟ್ ಇನ್ಕ್ಲೂಸಿವ್ ಅಲಯನ್ಸ್ ಎಂದು ಘೋಷಿಸಿದರು.
ಮೈತ್ರಿ ಕೂಟದ ಹೆಸರು ಬದಲಾವಣೆಗೆ ಎಲ್ಲಾ ಪಕ್ಷಗಳು ಸಮ್ಮತಿ ಸೂಚಿಸಿವೆ. ಮುಂದಿನ ಸಭೆ ಮಹಾರಾಷ್ಟ್ರದಲ್ಲಿ ನಡೆಯಲಿದೆ. ಅಂದು ಇನ್ನಷ್ಟು ತೀರ್ಮಾನಗಳು ಕೈಗೊಳ್ಳಲಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯನ್ನು ಸೋಲಿಸುವುದೇ ನಮ್ಮ ಗುರಿ ಎಂದರು ಮಲ್ಲಿಕಾರ್ಜುನ್ ಖರ್ಗೆ.
ಬಿಜೆಪಿಯನ್ನು ಸೋಲಿಸಲು ಎಲ್ಲಾ ಪಕ್ಷಗಳು ಒಂದೇ ವೇದಿಕೆಯಲ್ಲಿ ಒಂದಾಗಿವೆ. ಜೂನ್‌ನಲ್ಲಿ ಎಲ್ಲರೂ ಸೇರಿ ಪಾಟ್ನಾದಲ್ಲಿ ಮೊದಲ ಸಭೆ ನಡೆಸಿದ್ದೆವು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಈಗ ಬೆಂಗಳೂರಲ್ಲಿ 2 ದಿನಗಳ ಕಾಲ ಸಭೆ ಮಾಡಿದ್ದೇವೆ. ಮುಂದಿನ ಸಭೆ ಮಹಾರಾಷ್ಟ್ರದಲ್ಲಿ ನಡೆಸಿ ಮತಗಳ ವಿಭಜನೆ ಆಗದ ರೀತಿಯಲ್ಲಿ ನೋಡಿಕೊಳ್ಳುತ್ತೇವೆ. ಮೂರನೇ ಬಾರಿಗೆ ಬಿಜೆಪಿ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಬಾರದು. ಈ ಉದ್ದೇಶದಿಂದಲೇ ಲೋಕಸಭೆ ಚುನಾವಣೆಯನ್ನು ಒಟ್ಟಾಗಿ ಎದುರಿಸಲಿದ್ದೇವೆ ಎಂದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ