newsfirstkannada.com

ಪಕ್ಷದ ಬ್ಯಾಂಕ್ ಖಾತೆಗಳನ್ನ ಫ್ರೀಜ್​​ ಮಾಡಿದ್ದಾರೆ, ಎಲೆಕ್ಷನ್​​ಗೆ ಕಷ್ಟ ಆಗ್ತಿದೆ -ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೊಸ ಬಾಂಬ್

Share :

Published March 21, 2024 at 12:39pm

Update March 21, 2024 at 12:40pm

    ಕಾಂಗ್ರೆಸ್​ನ ಎಲ್ಲಾ ಬ್ಯಾಂಕ್ ಖಾತೆಗಳನ್ನು ಸ್ಥಗಿತ ಮಾಡಲಾಗಿದ್ಯಂತೆ

    ಸುದ್ದಿಗೋಷ್ಟಿ ನಡೆಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್​

    ಯಾವುದೇ ರಾಜಕೀಯ ಪಕ್ಷಗಳು ಆದಾಯ ತೆರಿಗೆ ವ್ಯಾಪ್ತಿಗೆ ಬರಲ್ಲ-ಖರ್ಗೆ

ಕಾಂಗ್ರೆಸ್​ ಪಕ್ಷದ ಬ್ಯಾಂಕ್ ಖಾತೆಗಳನ್ನು ಪ್ರಧಾನಿ ಮೋದಿ ಸರ್ಕಾರ ಫ್ರೀಜ್ ಮಾಡಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್ ಹಾಕಿದ್ದಾರೆ.

ದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಅವರು.. ನಾವು ಪ್ರಜಾಪ್ರಭುತ್ವವನ್ನು ಉಳಿಸಬೇಕಾಗಿದೆ. ಇದಕ್ಕಾಗಿ ಎಲ್ಲರಿಗೂ ಸಮಾನ ಅವಕಾಶ ಸಿಗಬೇಕು. ದೇಶದ ಸಂಪನ್ಮೂಲಗಳು, ಮಾಧ್ಯಮಗಳು, ಸಾಂವಿಧಾನಿಕ ಮತ್ತು ನ್ಯಾಯಾಂಗ ಸಂಸ್ಥೆಗಳ ಮೇಲೆ ಸರ್ಕಾರದ ನಿಯಂತ್ರಣ ಇದೆ ಎಂದು ಕಿಡಿಕಾರಿದರು.

ನ್ಯಾಯಾಂಗ ಸಂಸ್ಥೆಗಳನ್ನು ವಶಕ್ಕೆ ಪಡೆದಿದೆ
ದೇಶದಲ್ಲಿ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಭಾರತವು ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಹೆಸರುವಾಸಿ. ಪ್ರತಿಯೊಬ್ಬ ನಾಗರಿಕನೂ ಮತದಾನ ಮಾಡಲು ಉತ್ಸುಕನಾಗಿದ್ದಾನೆ. ಇಲ್ಲಿಯವರೆಗೆ ನ್ಯಾಯಸಮ್ಮತ ಚುನಾವಣೆ ನಡೆದಿದೆ. ಇದಕ್ಕೆ ಎಲ್ಲಾ ರಾಜಕೀಯ ಪಕ್ಷಗಳಿಗೂ ಸಮಾನ ಅವಕಾಶ ಸಿಗಬೇಕು. ಆಡಳಿತರೂಢ ಬಿಜೆಪಿ ಸರ್ಕಾರ ಸಂಪನ್ಮೂಲಗಳು, ಮಾಧ್ಯಮಗಳು, ಸಾಂವಿಧಾನಿಕ ಮತ್ತು ನ್ಯಾಯಾಂಗ ಸಂಸ್ಥೆಗಳನ್ನು ವಶಪಡಿಸಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಬ್ಯಾಂಕ್ ಖಾತೆಗಳು ಫ್ರೀಜ್..!
ಸುಪ್ರೀಂ ಕೋರ್ಟ್‌ನ ತೀರ್ಪಿನ ನಂತರ ಪಡೆದ ಚುನಾವಣಾ ಬಾಂಡ್‌ಗಳ ವಿವರಗಳು ಆಶ್ಚರ್ಯಕರ ಮತ್ತು ನಾಚಿಕೆಗೇಡಿನ ಸಂಗತಿ. ಕಳೆದ 70 ವರ್ಷಗಳಲ್ಲಿ ನ್ಯಾಯಯುತವಾಗಿ ಚುನಾವಣೆಗಳು ನಡೆದಿವೆ. ಆರೋಗ್ಯಕರ ಪ್ರಜಾಪ್ರಭುತ್ವದ ಚಿತ್ರಣವನ್ನು ಸೃಷ್ಟಿಸಲಾಗಿತ್ತು. ಆದರೆ ಇಂದು ಅದರ ಮೇಲೆ ಪ್ರಶ್ನಾರ್ಥಕ ಚಿಹ್ನೆ ಎತ್ತಲಾಗಿದೆ. ಈಗಿನ ಸರ್ಕಾರ ಸಾವಿರಾರು ಕೋಟಿ ರೂಪಾಯಿಗಳನ್ನು ತನ್ನ ಖಾತೆಗೆ ತುಂಬಿಕೊಂಡಿದೆ ಎಂದು ಗುಡುಗಿದ್ದಾರೆ.

ಮತ್ತೊಂದೆಡೆ ಹಣದ ಕೊರತೆಯಿಂದ ಚುನಾವಣೆಗೆ ಸ್ಪರ್ಧಿಸಲು ಸಾಧ್ಯವಾಗದಂತೆ ನಮ್ಮ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ. ನಮಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಮಾನ ಅವಕಾಶ ನೀಡುತ್ತಿಲ್ಲ. ಇದು ಆಡಳಿತ ಪಕ್ಷದ ಅಪಾಯಕಾರಿ ಆಟ. ಇದು ನಮಗೆ ಭಾರೀ ಹೊಡೆತವನ್ನು ನೀಡುತ್ತದೆ ಎಂದರು.

ಮುಕ್ತ ಚುನಾವಣೆಗೆ ಬ್ಯಾಂಕ್ ಖಾತೆ ಬೇಕು
ಬಿಜೆಪಿಯವರು ಕೆಲವು ಕಂಪನಿಗಳ ಮೂಲಕ ಹಣ ಪಡೆದಿದ್ದಾರೆ ಎಂದು ನಾನು ಹೇಳಲ್ಲ. ಸುಪ್ರೀಂ ಕೋರ್ಟ್ ಈ ಬಗ್ಗೆ ತನಿಖೆ ನಡೆಸುತ್ತಿದೆ. ಸತ್ಯ ಶೀಘ್ರದಲ್ಲೇ ನಮ್ಮ ಮುಂದೆ ಬರಲಿದೆ ಎಂದು ನಂಬಿದ್ದೇನೆ. ಸಾಂವಿಧಾನಿಕ ಸಂಸ್ಥೆಗಳು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ಬಯಸಿದರೆ, ಅವರು ನಮ್ಮ ಬ್ಯಾಂಕ್ ಖಾತೆಗಳನ್ನು ರಿಸ್ಟೋರ್ ಮಾಡಬೇಕು. ಯಾವುದೇ ರಾಜಕೀಯ ಪಕ್ಷಗಳು ಆದಾಯ ತೆರಿಗೆ ವ್ಯಾಪ್ತಿಗೆ ಬರುವುದಿಲ್ಲ ಎಂದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪಕ್ಷದ ಬ್ಯಾಂಕ್ ಖಾತೆಗಳನ್ನ ಫ್ರೀಜ್​​ ಮಾಡಿದ್ದಾರೆ, ಎಲೆಕ್ಷನ್​​ಗೆ ಕಷ್ಟ ಆಗ್ತಿದೆ -ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೊಸ ಬಾಂಬ್

https://newsfirstlive.com/wp-content/uploads/2024/03/RAHUL-GANDHI-2.jpg

Load More