newsfirstkannada.com

‘295 ಕ್ಷೇತ್ರದಲ್ಲಿ ಗೆಲುವು ನಮ್ಮದೇ’- ಎಕ್ಸಿಟ್‌ ಪೋಲ್‌ಗೂ ಮುನ್ನ ಮಲ್ಲಿಕಾರ್ಜುನ ಖರ್ಗೆ ಭವಿಷ್ಯ

Share :

Published June 1, 2024 at 6:13pm

    ಎಕ್ಸಿಟ್ ಪೋಲ್‌ಗೂ ಮುನ್ನ ಮಲ್ಲಿಕಾರ್ಜುನ ಖರ್ಗೆ ಅವರಿಂದ ಅಚ್ಚರಿ ಹೇಳಿಕೆ

    ದೆಹಲಿಯಲ್ಲಿ ಇಂಡಿಯಾ ಮೈತ್ರಿಪಕ್ಷದ ನಾಯಕರಿಂದ ಮಹತ್ವದ ಮಾತುಕತೆ

    ಇಂಡಿಯಾ ಮೈತ್ರಿಕೂಟದ ಸಭೆ ಬಳಿಕ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದೇನು?

ನವದೆಹಲಿ: 2024ರ ಲೋಕಸಭಾ ಚುನಾವಣೆಯ ಮತದಾನ ಮುಕ್ತಾಯವಾಗಿದೆ. ಇನ್ನು ಚುನಾವಣಾ ಫಲಿತಾಂಶ ಒಂದೇ ಬಾಕಿ ಉಳಿದಿದೆ. ಜೂನ್ 4 ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದ್ದು, ಅದಕ್ಕೂ ಮುನ್ನ ರಾಜಕೀಯ ನಾಯಕರ ಲೆಕ್ಕಾಚಾರ ಕುತೂಹಲ ಕೆರಳಿಸಿದೆ.

ದೇಶಾದ್ಯಂತ ಮತದಾನ ಮುಕ್ತಾಯವಾಗುತ್ತಿದ್ದಂತೆ ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಘಟಾನುಘಟಿ ನಾಯಕರು ಮಹತ್ವದ ಚರ್ಚೆ ನಡೆಸಿದ್ದಾರೆ. ಇಂಡಿಯಾ ಮೈತ್ರಿಪಕ್ಷದ ಪ್ರಮುಖ ನಾಯಕರು ಮಹತ್ವದ ಮಾತುಕತೆ ನಡೆಸಿದ್ದು, ಚುನಾವಣಾ ಫಲಿತಾಂಶದ ಬಳಿಕ ನಡೆಯೋ ರಾಜಕೀಯ ಬೆಳವಣಿಗೆಯ ಬಗ್ಗೆ ಮಾತನಾಡಿದ್ದಾರೆ.

ಇಂಡಿಯಾ ಮೈತ್ರಿಕೂಟದ ಸಭೆ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ 295ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎನ್ನುವ ವಿಶ್ವಾಸವನ್ನು ಮಲ್ಲಿಕಾರ್ಜುನ ಖರ್ಗೆ ಅವರು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 6 ಬಾರಿ ExitPoll ಲೆಕ್ಕಾಚಾರ ತಲೆಕೆಳಗಾಗಿತ್ತು.. ಲೋಕಸಭಾ ಚುನಾವಣೆಯ ಭವಿಷ್ಯ ನಿಜವಾಗುತ್ತಾ? 

ಇಂದು ನಡೆದ ಸಭೆಯಲ್ಲಿ ಇಂಡಿಯಾ ನಾಯಕರು ಸುಮಾರು ಎರಡೂವರೆ ಗಂಟೆಗಳ ಕಾಲ ಮಾತುಕತೆ ನಡೆಸಿದ್ದೇವೆ. ಎಕ್ಸಿಟ್ ಪೋಲ್ ರಿಸಲ್ಟ್ ಬಳಿಕ ಮೈತ್ರಿಕೂಟದ ನಾಯಕರು ಮತ್ತೊಮ್ಮೆ ಚರ್ಚಿಸುತ್ತೇವೆ. ನಾವು ಸತ್ಯವನ್ನು ಹೇಳುತ್ತೇವೆ. ಮತದಾರರ ಸರ್ವೇ ಪ್ರಕಾರ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಗಳು 295 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲಿದ್ದಾರೆ. ಜೂನ್ 4ರ ಚುನಾವಣಾ ಫಲಿತಾಂಶಕ್ಕೆ ನಾವು ಕಾಯುತ್ತಿದ್ದೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಯ ಎಕ್ಸಿಟ್ ಪೋಲ್‌ ಭವಿಷ್ಯ ಇಂದೇ ಪ್ರಕಟವಾಗಲಿದೆ. ಈ ಎಕ್ಸಿಟ್ ಪೋಲ್‌ಗೂ ಮುನ್ನ ಮಲ್ಲಿಕಾರ್ಜುನ ಖರ್ಗೆ ಅವರು ಇಂಡಿಯಾ ಮೈತ್ರಿಕೂಟದ ಪಕ್ಷಗಳಿಗೆ 295 ಸ್ಥಾನ ಗೆಲ್ಲಲಿದೆ ಎಂದು ಹೇಳಿರುವುದು ಅಚ್ಚರಿಗೆ ಕಾರಣವಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘295 ಕ್ಷೇತ್ರದಲ್ಲಿ ಗೆಲುವು ನಮ್ಮದೇ’- ಎಕ್ಸಿಟ್‌ ಪೋಲ್‌ಗೂ ಮುನ್ನ ಮಲ್ಲಿಕಾರ್ಜುನ ಖರ್ಗೆ ಭವಿಷ್ಯ

https://newsfirstlive.com/wp-content/uploads/2024/06/Kharge-Congress.jpg

Load More