/newsfirstlive-kannada/media/post_attachments/wp-content/uploads/2024/06/HDK-3.jpg)
2024ರ ಲೋಕಸಭಾ ಚುನಾವಣೆಯ ಮತ ಎಣಿಕೆ ಈಗಾಗಲೇ ಎಲ್ಲ ಕಡೆ ಆರಂಭವಾಗಿದೆ. ಸ್ಟ್ರಾಂಗ್ ರೂಮ್ನಲ್ಲಿ ಅಧಿಕಾರಿಗಳೆಲ್ಲ ಮತ ಎಣಿಕೆಯಲ್ಲಿ ಫುಲ್ ಬ್ಯುಸಿ ಆಗಿದ್ದಾರೆ. ಕರ್ನಾಟಕದಲ್ಲೂ ಲೋಕಸಭಾ ಚುನಾವಣೆಯ ಮತಎಣಿಕೆ ಕಾರ್ಯ ಶುರುವಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು 108 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಈ ಬಾರಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್ನ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಕಣಕ್ಕೆ ಇಳಿದಿದ್ರೆ, ಕಾಂಗ್ರೆಸ್ನಿಂದ ಸ್ಟಾರ್ ಚಂದ್ರು ಸ್ಪರ್ಧೆ ಮಾಡಿದ್ದಾರೆ. ಈಗಾಗಲೇ ಅಂಚೆ ಮತಗಳ ಎಣಿಕೆ ಆರಂಭವಾಗಿದ್ದು ಕುಮಾರಸ್ವಾಮಿಯವರು ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದಾರೆ. 108 ಅಂಚೆ ಮತಗಳಿಂದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಅದರಂತೆ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರುಗೆ ಹಿನ್ನಡೆಯಾಗಿದೆ.
ಇದನ್ನೂ ಓದಿ:BREAKING: ಲೋಕಸಭಾ ಚುನಾವಣೆ: ಮತಎಣಿಕೆ ಕಾರ್ಯ ಆರಂಭ; ಮೈಸೂರಲ್ಲಿ ಬಿಜೆಪಿಗೆ ಮುನ್ನಡೆ
ಸುಮಲತಾ ಅಂಬರೀಶ್ ಅವರು ಮಂಡ್ಯದಿಂದ ಸ್ಪರ್ಧೆ ಮಾಡುತ್ತಾರೆ ಎಂದು ಹೇಳಲಾಗಿತ್ತು. ಆದರೆ ಕೊನೆ ಸಮಯದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧೆಗೆ ಇಳಿದಿದ್ದರು. ಹೀಗಾಗಿ ಅಖಾಡದಿಂದ ಸುಮಲತಾ ಅಂಬರೀಶ್ ಅವರು ಹಿಂದೆ ಸರಿದಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ