Advertisment

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ; ಅತ್ತ ಗಂಡನೂ ಆತ್ಮ*ಹತ್ಯೆ; ಕೋಪಗೊಂಡು ಅಳಿಯನ ಮನೆಗೆ ಬೆಂಕಿ ಇಟ್ಟ ಕುಟುಂಬಸ್ಥರು

author-image
Veena Gangani
Updated On
ಮಂಡ್ಯದಲ್ಲಿ ಗಂಡ, ಹೆಂಡತಿ ದುರಂತ ಅಂತ್ಯ.. ಒಂದು ವರ್ಷದ ಹೆಣ್ಣು ಮಗು ಅನಾಥ; ಅಸಲಿಗೆ ಆಗಿದ್ದೇನು?
Advertisment
  • ಅಳಿಯನ ಮನೆಯಲ್ಲಿದ್ದ ಪೀಠೋಪಕರಣ ಧ್ವಂಸ
  • ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
  • ಪತ್ನಿ ಸಾವನ್ನಪ್ಪಿದಂತೆ ಪತಿ ಕೂಡ ಸಾವು.. ಅಷ್ಟಕ್ಕೂ ಆಗಿದ್ದೇನು?

ಮಂಡ್ಯ: ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿರೋ ಘಟನೆ ಕೆ.ಆರ್‌.ಪೇಟೆ ತಾ. ಗದ್ದೆಹೊಸೂರಿನಲ್ಲಿ ನಡೆದಿದೆ. ಸ್ವಾತಿ (21) ಮೃತ ಗೃಹಿಣಿ.

Advertisment

ಇದನ್ನೂ ಓದಿ:ನಿಮ್ಮಿಬ್ಬರ ಮೇಲೆ ಯಾರ ಕಣ್ಣು ಬೀಳದಿರಲಿ.. ನೇಹಾ ಗೌಡ, ಅನುಪಮಾ ಗೌಡ ಕ್ಯೂಟ್ ವಿಡಿಯೋ ಇಲ್ಲಿದೆ ನೋಡಿ!

ಗೃಹಿಣಿ ಸ್ವಾತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಇದರಿಂದ ಆಕ್ರೋಶಗೊಂಡ ಮೃತಳ ಕುಟುಂಬಸ್ಥರು ನಮ್ಮ ಮಗಳನ್ನು ಗಂಡ ಮೋಹನ್ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ಮಾತ್ರವಲ್ಲದೆ, ಅಳಿಯನ ಮನೆಯಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಮನೆಗೆ ಬೆಂಕಿ ಹಚ್ಚಿ ಮೃತಳ ಕುಟುಂಬಸ್ಥರ ಆಕ್ರೋಶ ಹೊರ ಹಾಕಿದ್ದಾರೆ.

publive-image

ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಕಿಕ್ಕೇರಿ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಘಟನಾ ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.

Advertisment

publive-image

ಇನ್ನು, ಮನೆಗೆ ಬೆಂಕಿ ಹಚ್ಚುತ್ತಿದ್ದಂತೆ ಅತ್ತ ಗಂಡ ಹಾಗೂ ಆತನ ಪೋಷಕರು ಸ್ಥಳದಿಂದ ಪರಾರಿಯಾಗಿದ್ದಾರೆ. ಹಾಗೂ ಆತನ ಪೋಷಕರು ಪರಾರಿ. ಇನ್ನು, ಮರಣೋತ್ತರ ಪರೀಕ್ಷೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ಮೃತದೇಹವನ್ನು ರವಾನೆ ಮಾಡಲಾಗಿದೆ. ನಾಪತ್ತೆಯಾಗಿರುವ ಗಂಡ ಹಾಗೂ ಪೋಷಕರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಅತ್ತ ಪತ್ನಿ ನೇಣು ಬಿಗಿದಂತೆ ಇತ್ತ ಪತಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಕೆರೆಯಿಂದ ಪೊಲೀಸರು ಮೋಹನ್ ಶವ ಹೊರ ತೆಗೆದ್ದಾರೆ. ಗ್ರಾಮಸ್ಥರ ಸಹಾಯದೊಂದಿಗೆ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ‌ ರವಾನಿಸಲಾಗಿದೆ.

publive-image

ಸದ್ಯ ಪತಿ, ಪತ್ನಿ ಸಾವಿನ ಬಗ್ಗೆ ‌ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮತ್ತೊಂದೆಡೆ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನಲೆ ಪೊಲೀಸರ ಬಿಗಿ ಬಂದೋಬಸ್ತ್​​ ಮಾಡಿದ್ದಾರೆ.

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment