ಘಟನಾ ಸ್ಥಳಕ್ಕೆ ಮಂಡ್ಯದ ಎಸ್ಪಿ ಎನ್.ಯತೀಶ್ ಭೇಟಿ
ಪ್ರಕರಣದ ಆರೋಪಿ ಹಿಡಿಯಲು ಬಲೆ ಬೀಸಿದ ಪೊಲೀಸರು
ಮಗುವಿನ ಸ್ಥಿತಿ ಚಿಂತಾಜನಕ, ಮೈಸೂರಿನ ಆಸ್ಪತ್ರೆಗೆ ದಾಖಲು
ಮಂಡ್ಯ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಕಿರಾತಕ ಪತಿಯು ತನ್ನ ಪತ್ನಿಯನ್ನು ಹತ್ಯೆಗೈದು, 1 ವರ್ಷದ ಮಗುವಿನ ಮೇಲೆ ಮಾರಾಣಾಂತಿಕ ಹಲ್ಲೆ ಮಾಡಿ ಎಸ್ಕೇಪ್ ಆಗಿರುವ ಘಟನೆ ಪಾಂಡವಪುರ ತಾಲೂಕಿನ ಹೊಸಸಾಯಪನ ಹಳ್ಳಿಯಲ್ಲಿ ನಡೆದಿದೆ.
ಗ್ರಾಮದ ವರ್ಷಿತಾ (24) ಪತಿಯಿಂದ ಕೊಲೆಯಾದವರು. ಈಕೆಯ ಗಂಡ ಗೌತಮ್ (34) ಕೃತ್ಯವೆಸಗಿ ಪರಾರಿಯಾಗಿದ್ದಾನೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆರೋಪಿಯು ನಿನ್ನೆ ರಾತ್ರಿ ಪತ್ನಿ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಬಳಿಕ ತನ್ನ ಒಂದು ವರ್ಷದ ಮಗುವಿನ ಮೇಲೆ ಮಾರಾಣಾಂತಿಕವಾಗಿ ಹಲ್ಲೆ ಮಾಡಿ ನಂತರ ಓಡಿ ಹೋಗಿದ್ದಾನೆ.
ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಮಂಡ್ಯ ಎಸ್ಪಿ ಎನ್.ಯತೀಶ್ ಕೂಡ ಸ್ಥಳಕ್ಕೆ ಆಗಮಿಸಿದ್ದರು. ಈ ಬಗ್ಗೆ KRS ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ