newsfirstkannada.com

Mandya: ಕೆರಗೋಡು ಹನುಮ ಧ್ವಜ ವಿವಾದದಲ್ಲಿ ಪಿಡಿಓ ತಲೆದಂಡ..!

Share :

Published January 30, 2024 at 7:18am

Update January 30, 2024 at 7:19am

    ಕರ್ತವ್ಯ ಲೋಪ ಆರೋಪದಡಿ ಜೀವನ್​ ಅಮಾನತು

    ಕೆರಗೋಡು ಗ್ರಾಮದಲ್ಲಿ ಮುಂಜಾಗ್ರತ ಕ್ರಮವಾಗಿ ಬಿಗಿ ಬಂದೋಬಸ್ತ್​

    ಗಲಭೆ ಸೃಷ್ಟಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಿಎಂಗೆ ಪತ್ರ

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದ ಧ್ವಜಸ್ತಂಭ ವಿವಾದ ಬೂದಿ ಮುಚ್ಚಿದ ಕೆಂಡವಾಗಿದೆ. ಸರ್ಕಾರ ಮತ್ತು ವಿಪಕ್ಷಗಳ ಮಧ್ಯೆ ರಾಜಕೀಯ ಕಿತ್ತಾಟ ತಾರಕಕ್ಕೇರಿದೆ. ಕೆರಗೋಡು ಹನುಮ ಧ್ವಜ ತೆರವು ಗದ್ದಲದಲ್ಲಿ ಪಿಡಿಓ ತಲೆ ದಂಡವಾಗಿದೆ.

ಹನುಮ ಧ್ವಜ ತೆರವುಗೊಳಿಸಿದ್ದನ್ನು ಖಂಡಿಸಿ, ರಾಜ್ಯಾದ್ಯಂತ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ. ಇನ್ನು ಮಂಡ್ಯದಲ್ಲಿ ಜಂಟಿಯಾಗಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಮತ್ತು ಜೆಡಿಎಸ್​ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಈ ಗದ್ದಲಕ್ಕೆ ಮಂಡ್ಯ ಜಿಲ್ಲಾಡಳಿತವೇ ಕಾರಣ, ಜಿಲ್ಲಾಧಿಕಾರಿಯನ್ನು ಅಮಾನತು ಮಾಡುವಂತೆ ಮಾಜಿ ಸಿಎಂ ಹೆಚ್​ಡಿಕೆ ಆಗ್ರಹಿಸಿದ್ರು. ಇದರ ಬೆನ್ನಲ್ಲೇ ಕೆರಗೋಡು ಗ್ರಾಮದ ಪಿಡಿಓ ಬಿ.ಎಂ.ಜೀವನ್ ಅವರನ್ನು ಅಮಾನತು ಮಾಡಿ ಮಂಡ್ಯ ಜಿ.ಪಂ. ಸಿಇಓ ಆದೇಶ ಹೊರಡಿಸಿದ್ದಾರೆ.

ಧ್ವಜ ಸ್ತಂಭ ನಿರ್ಮಾಣಕ್ಕೆ ಅನುಮತಿ ನೀಡಿ ಕರ್ತವ್ಯ ಲೋಪ ಎಸಗಿದ್ದಾರೆ. ಈ ಪ್ರಕರಣದಲ್ಲಿ ನಿಯಮ ಉಲ್ಲಂಘಿಸಿ ಖಾಸಗಿಯವರಿಗೆ ಧ್ವಜ ಸ್ತಂಭ ನಿರ್ಮಾಣಕ್ಕೆ ನೀಡಲಾಗಿದೆ. ಹೀಗಾಗಿ ಕೆರಗೋಡು ಗ್ರಾಮದಲ್ಲಿ ನಡೆದ ಸಂಘರ್ಷಕ್ಕೆ ಪಿಡಿಓ ನೇರ ಕಾರಣವಾಗಿದ್ದಾರೆ. ಷರತ್ತು ಉಲ್ಲಂಘಿಸಿದ್ದರೂ ಕ್ರಮಕೈಗೊಳ್ಳದೆ ನಿರ್ಲಕ್ಷವಹಿಸಿದ್ದಾರೆ. ರಾಷ್ಟ್ರ ಧ್ವಜದ ಬದಲು ಹನುಮ ಧ್ವಜ ಹಾರಿಸಲು ಅವಕಾಶ ನೀಡಿರುವುದು ಹಾಗೂ ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬ ಕಾರಣ ನೀಡಿ ಬಿ.ಎಂ.ಜೀವನ್ ಅವರನ್ನು ಅಮಾನತು ಮಾಡಲಾಗಿದೆ.

ಕಾಂಗ್ರೆಸ್​​ನಿಂದ ಮಂಡ್ಯದಲ್ಲಿ ಶಾಂತಿಯಾತ್ರೆಗೆ ಪ್ಲಾನ್​

ಹನುಮ ಧ್ವಜ ತೆರವು ವಿವಾದಿಂದ ಕೆರಗೋಡು ಗ್ರಾಮ ಸದ್ಯ ಬೂದಿ ಮುಚ್ಚಿದ ಕೆಂಡವಾಗಿದೆ. ಮುಂಜಾಗ್ರತ ಕ್ರಮವಾಗಿ ಗ್ರಾಮದಲ್ಲಿ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದೆ. ಮತ್ತೊಂದೆಡೆ ಸಕ್ಕರೆ ನಾಡು ಮಂಡ್ಯದಲ್ಲಿ ಫ್ಲಾಗ್​ ಪಾಲಿಟಿಕ್ಸ್​ ತಾರಕಕ್ಕೇರಿದೆ. ಮಂಡ್ಯ ಶಾಸಕ ಗಣಿಗ ರವಿಕುಮಾರ್​ ಪರ ಪರ-ವಿರೋಧ ವ್ಯಕ್ತವಾಗಿದೆ. ಇನ್ನು ಜೆಡಿಎಸ್​, ಬಿಜೆಪಿ ವಿರುದ್ಧ ಕಿಡಿಕಾರಿದ ಶಾಸಕ ಗಣಿಗ ರವಿ, ಮಂಡ್ಯದಲ್ಲಿ ಶಾಂತಿ ಯಾತ್ರೆ ಮಾಡೋದಾಗಿ ಹೇಳಿದ್ದಾರೆ. ಕೆರಗೋಡು ಗ್ರಾಮದಲ್ಲಿ ಗಲಸಭೆ ಸೃಷ್ಟಿಸಿದವರ ವಿರುದ್ಧ ಕ್ರಮ ಆಗಬೇಕೆಂದು ಸಿಎಂ ಮತ್ತು ಗೃಹಸಚಿವರಿಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ

ಒಟ್ಟಾರೆ. ಹನುಮ ಧ್ವಜ ವಿವಾದದಿಂದ ಶಾಂತವಾಗಿದ್ದ ಸಕ್ಕರೆ ನಾಡು, ಕೊತಕೊತ ಕುದಿಯಲು ಶುರು ಮಾಡಿದೆ. ಸರ್ಕಾರ ಮತ್ತು ವಿಪಕ್ಷಗಳ ರಾಜಕೀಯ ಕಿತ್ತಾಟವೂ ಜೋರಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Mandya: ಕೆರಗೋಡು ಹನುಮ ಧ್ವಜ ವಿವಾದದಲ್ಲಿ ಪಿಡಿಓ ತಲೆದಂಡ..!

https://newsfirstlive.com/wp-content/uploads/2024/01/MND-KEREGODU.jpg

Load More