/newsfirstlive-kannada/media/post_attachments/wp-content/uploads/2023/07/MND_DRIVER-2.jpg)
ಮಂಡ್ಯ: ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಗಂಭೀರ ಆರೋಪ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ಮಂಡ್ಯದ KSRTC ಬಸ್ ಚಾಲಕ ಜಗದೀಶ್ ಸ್ಥಿತಿ ಚಿಂತಾಜನಕವಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ದಿಢೀರ್ ಭೇಟಿ ನೀಡಿ, ಬಸ್ ಚಾಲಕನ ಆರೋಗ್ಯವನ್ನು ವಿಚಾರಿಸಿದ್ದಾರೆ.
/newsfirstlive-kannada/media/post_attachments/wp-content/uploads/2023/07/MND_DIVER.jpg)
ನಿನ್ನೆ ಬಿಜಿ ನಗರದ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಗದೀಶ್ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವ, ಜಗದೀಶ್​​ನನ್ನು ನಿನ್ನೆ ರಾತ್ರಿ ಮೈಸೂರಿನ ಆಸ್ಪತ್ರೆಗೆ ಕುಟುಂಬಸ್ಥರು ದಾಖಲಿಸಿದ್ದಾರೆ.
ವೈದ್ಯರು ಏನಂದ್ರು?
ಆರೋಗ್ಯ ಸ್ಥಿತಿ ಬಗ್ಗೆ ಏನೂ ಹೇಳಲು ಆಗಲ್ಲ. ಬದುಕಿಸಲು ಪ್ರಯತ್ನ ಮಾಡ್ತೇವೆ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ. ನಿನ್ನೆ ಮಂಡ್ಯದ ನಾಗಮಂಗಲದ KSRTC ಬಸ್ ಡಿಪೋನಲ್ಲಿ ಜಗದೀಶ್ ವಿಷ ಸೇವಿಸಿದ್ದರು. ಕೃಷಿ ಸಚಿವ ಚಲುವರಾಯಸ್ವಾಮಿ ಸೂಚನೆ ಮೇರೆಗೆ ಜಗದೀಶ್ ವರ್ಗಾವಣೆ ಆಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವರ್ಗಾವಣೆ ಮಾಡಿದ್ದಕ್ಕೆ ನೊಂದು ಡಿಪೋದಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಗದೀಶ್ ತಂದೆ ಜೆಡಿಎಸ್ ಪರ ನಿಂತಿದ್ದಕ್ಕೆ ವರ್ಗಾವಣೆ ಶಿಕ್ಷೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
/newsfirstlive-kannada/media/post_attachments/wp-content/uploads/2023/07/MND_DRIVER-1.jpg)
ಮಂಡ್ಯದಲ್ಲಿ ಭಾರೀ ಪ್ರತಿಭಟನೆ
ಇತ್ತ ಮಂಡ್ಯ KSRTC ಸಿಬ್ಬಂದಿ ಕೃಷಿ ಸಚಿವರ ವಿರುದ್ಧ ಸಮರ ಸಾರಿದ್ದಾರೆ. ಇಂದು ಕರ್ತವ್ಯಕ್ಕೆ ಹಾಜರಾಗದೇ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗಮಂಗಲದ ಡಿಪೋದಿಂದ ಯಾವುದೇ ಬಸ್​​ಗಳು ಆಪರೇಟ್ ಆಗಿಲ್ಲ. 60ಕ್ಕೂ ಹೆಚ್ಚು ಬಸ್​​ಗಳು ನಿಲ್ದಾಣದಲ್ಲಿಯೇ ಠಿಕಾಣಿ ಹೂಡಿವೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us