/newsfirstlive-kannada/media/post_attachments/wp-content/uploads/2025/07/mandya.jpg)
ಮಂಡ್ಯ: ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋಗಿ ವ್ಯಕ್ತಿಯೊಬ್ಬ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ಘಟನೆ ಸರ್ವಧರ್ಮ ಆಶ್ರಮದ ಬಳಿ ನಡೆದಿದೆ.
ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಸರ್ವಧರ್ಮ ಆಶ್ರಮದಲ್ಲಿ ನಿನ್ನೆ ಸಂಜೆ ಈ ಘಟನೆ ನಡೆದಿದೆ. ಮಹೇಶ್ (36) ನದಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ. ಈ ಮಹೇಶ್ ಮೈಸೂರಿನಲ್ಲಿ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ.
ನಿನ್ನೆ ಸ್ನೇಹಿತರೊಂದಿಗೆ ಕೆಆರ್‌ಎಸ್ ಭಾಗಕ್ಕೆ ಪ್ರವಾಸಕ್ಕೆ ಬಂದಿದ್ದಾಗ ಸರ್ವಧರ್ಮ ಆಶ್ರಮದ ಬಳಿ ಫೋಟೋ ತೆಗೆಸಿಕೊಳ್ಳಲು ಹೋಗಿದ್ದಾನೆ. ಈ ವೇಳೆ ಆಯಾತಪ್ಪಿ ಕಾವೇರಿ ನದಿಗೆ ಕಾಲು ಜಾರಿ ಬಿದ್ದಿದ್ದಾನೆ. ಸದ್ಯ ನದಿಯಲ್ಲಿ ಕೊಚ್ಚಿ ಹೋದ ಮಹೇಶ್‌ಗಾಗಿ ಅಗ್ನಿಶಾಮಕ ದಳದಿಂದ ಶೋಧ ಕಾರ್ಯ ನಡೆಸುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ