ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಆಗಲಿದೆ
MP ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಜೆಡಿಎಸ್ ಮಾಜಿ ಶಾಸಕ
ನೀರು ಹರಿಸುವುದನ್ನ ನಿಲ್ಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು
ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ರೈತರು ನಿರಂತರ ಪ್ರತಿಭಟನೆ ಮಾಡುತ್ತಿದ್ದಾರೆ. ಇದೀಗ ರೈತರ ಹೋರಾಟಕ್ಕೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಫೇಸ್ಬುಕ್ ಮೂಲಕ ಬೆಂಬಲ ಸೂಚಿಸಿದ್ದಾರೆ.
ಕಳೆದ ಮೂರ್ನಾಲ್ಕು ದಿನಗಳಲ್ಲಿ ಮಂಡ್ಯದಲ್ಲಿ ರೈತರು ಅಹೋರಾತ್ರಿ ಪ್ರತಿಭಟನೆ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕುವ ಮೂಲಕ ಕಾವೇರಿ ಹೋರಾಟಕ್ಕೆ ಸಂಸದೆ ಸುಮಲತಾ ಅಂಬರೀಶ್ ಧುಮುಕಿದ್ದಾರೆ. ನಮ್ಮ ರೈತರ ಪರ ಸರ್ಕಾರ ನಿಲ್ಲಬೇಕು ಎಂದು ಮನವಿ ಮಾಡಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಕುರಿತು ರೈತ ಸಂಘಟನೆಗಳು, ರೈತಪರ ಅನೇಕ ಹೋರಾಟಗಾರರು ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟಕ್ಕೆ ನನ್ನ ಬೆಂಬಲವಿದೆ. ನಮ್ಮ ನೀರು, ನಮ್ಮ ಹಕ್ಕು. ರೈತರು ನೀರಿನ ಕೊರತೆ ಅನುಭವಿಸುತ್ತಿದ್ದರೂ ನಮ್ಮ ರೈತರಿಗೆ ಅನ್ಯಾಯ ಮಾಡಿ ನೀರು ಹರಿಸುತ್ತಿರುವುದು ಎಷ್ಟು ಸರಿ. ಕೂಡಲೇ ಸರ್ಕಾರ ನೀರು ಹರಿಸುವುದನ್ನು ನಿಲ್ಲಿಸಿ, ರೈತರ ಪರ ನಿಲ್ಲಬೇಕಿದೆ. ಮುಂದಿನ ದಿನಗಳಲ್ಲಿ ರೈತರ ಗದ್ದೆಗಳ ಜೊತೆಗೆ ಕುಡಿಯುವ ನೀರಿಗೂ ತೊಂದರೆ ಆಗಲಿದೆ. ಹೀಗಾಗಿ ಈ ಗಂಭೀರ ಸಮಸ್ಯೆಯನ್ನು ಸೂಕ್ತ ರೀತಿಯಲ್ಲಿ ಸರ್ಕಾರ ಬಗೆಹರಿಸಿ ರೈತರಿಗೆ ನ್ಯಾಯ ಕೊಡಿಸಬೇಕಿದೆ ಎಂದು ಸುಮಲತಾ ಅಂಬರೀಶ್ ಅವರು ತಮ್ಮ ಫೇಸ್ಬುಕ್ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
ಸಂಸದೆ ಸುಮಲತಾ ಅವರು ಕಾವೇರಿ ನೀರು ಹೋರಾಟದ ರೈತರ ಪರ ನಿಲ್ಲದಕ್ಕೆ ಮೊನ್ನೆಯಷ್ಟೇ ಜೆಡಿಎಸ್ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಆಕ್ರೋಶ ವ್ಯಕ್ತಪಡಿಸಿದ್ದರು. ಸಂಸದೆಯವರು ಬರ್ತ್ಡೇ ಪಾರ್ಟಿಯಲ್ಲಿ ಕೇಕ್ ತಿನ್ನಿಸುವುದರಲ್ಲಿ ಬ್ಯುಸಿಯಾಗಿದ್ದಾರೆ. ಕೇವಲ ಕಲ್ಲು-ಕ್ವಾರಿಗಳ ವಿಚಾರದಲ್ಲಿ ಧ್ವನಿ ಎತ್ತಿದ್ದರು. ಈಗ ರೈತರ ಪರ ನಿಲ್ಲುತ್ತಿಲ್ಲ. ಹೀಗಾಗಿ ಅವರ ನಡವಳಿಕೆ ಆಶ್ವರ್ಯ ತಂದಿದ್ದು, ಜನರು ಯಾಕಾದ್ರು ಗೆಲ್ಲಿಸಿದ್ವಿ ಎನ್ನುತ್ತಿದ್ದಾರೆ ಅಂತಾ ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ ನಡೆಸಿದ್ದರು. ಸದ್ಯ ಇದರ ಬೆನ್ನಲ್ಲೇ ಸುಮಲತಾ ಅವರು ಮಂಡ್ಯ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ