/newsfirstlive-kannada/media/post_attachments/wp-content/uploads/2025/05/MNG_IPS.jpg)
ಮಂಗಳೂರು: ಅಬ್ದುಲ್ ರಹೀಮ್ ಹತ್ಯೆ ಬೆನ್ನಲ್ಲೇ ಕಮಿಷನರ್ ಹಾಗೂ ಎಸ್ಪಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಮಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಅರುಣ್ ಕೆ ಅವರನ್ನ ಹೊಸದಾಗಿ ನೇಮಕ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದೇ ಪದೇ ಕೋಮುಗಲಭೆ ಸೃಷ್ಟಿ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳ ಹಿರಿಯ ಐಪಿಎಸ್ ಅಧಿಕಾರಿಗಳ ಎತ್ತಂಗಡಿ ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾದ ಕಾರಣ ಉನ್ನತ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿದೆ.
ಮಂಗಳೂರು ನಗರದ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಯತೀಶ್ ಎನ್. ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಇವರ ಸ್ಥಾನಕ್ಕೆ ಮಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಅರುಣ್ ಕೆ ಅವರನ್ನ ನೂತನವಾಗಿ ನೇಮಕ ಮಾಡಲಾಗಿದೆ. ಅರುಣ್ ಕೆ ಅವರು 2014ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದಾರೆ.
ಇದನ್ನೂ ಓದಿ: ಪಂಜಾಬ್ ಕಿಂಗ್ಸ್ ಆಲೌಟ್.. ಆರ್ಸಿಬಿಗೆ ಆರಂಭಿಕ ಜಯ
ಮಂಗಳೂರು ನಗರ ಪೊಲೀಸ್ ಆಯುಕ್ತ, 2008ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆರ್ಥಿಕ ಅಪರಾಧಗಳು, ಅಪರಾಧ ತನಿಖಾ ಇಲಾಖೆ ಡಿಐಜಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಬೆಳಗಾವಿ ಪೊಲೀಸ್ ಆಯುಕ್ತರೂ ವರ್ಗಾವಣೆ
ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬಾನ್ಯಾಂಗ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇವರ ಜಾಗಕ್ಕೆ ಸೈಬರ್ ಅಪರಾಧ ಮತ್ತು ಮಾದಕ ದ್ರವ್ಯ, ಕ್ರಿಮಿನಲ್ ಇನ್ವೆಸ್ಟಿಗೇಷನ್ ವಿಭಾಗದ ಡಿಐಜಿ ಬೊರಸೆ ಭೂಷಣ್ ಗುಲಾಬ್ರಾವ್ ಅವರನ್ನು ನೇಮಕ ಮಾಡಲಾಗಿದೆ.
ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ