/newsfirstlive-kannada/media/post_attachments/wp-content/uploads/2025/05/mangalore-rain-2.jpg)
ಮಂಗಳೂರು: ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಗೆ ಕರಾವಳಿ ಭಾಗದ ಜನಜೀವನ ಅಸ್ತವ್ಯಸ್ತವಾಗಿದೆ. ಹವಾಮಾನ ಇಲಾಖೆ ಮೇ 28ರವರೆಗೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ರೆಡ್ ಅಲರ್ಟ್ ಇದ್ದು, ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಎರಡು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ.
/newsfirstlive-kannada/media/post_attachments/wp-content/uploads/2025/05/Mangalore-Rain-1.jpg)
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮೇ 27 ಮತ್ತು ಮೇ 28 ರಂದು ಅಂಗನವಾಡಿ ಸೇರಿದಂತೆ ದ್ವಿತೀಯ ಪಿಯುಸಿವರೆಗಿನ ಶಾಲಾ- ಕಾಲೇಜಿಗಳಿಗೆ ರಜೆ ಘೋಷಿಸಿ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಜ್ವರ, ನೆಗಡಿ ಇದ್ದ ಮಕ್ಕಳಿಗೆ ರಜೆ ಕೊಡಿ.. ರಾಜ್ಯದ ಎಲ್ಲಾ ಶಾಲೆಗಳಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ
ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮೇ 28ರ ಬಳಿಕ ವಾತಾವರಣ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us