ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಭಯಾನಕ ಆಕ್ಸಿಡೆಂಟ್
ಗಂಭೀರವಾಗಿ ಗಾಯಗೊಂಡ ಯುವಕ ಆಸ್ಪತ್ರೆಗೆ ದಾಖಲು
ಉಡುಪಿ ಕಡೆಯಿಂದ ಮಂಗಳೂರಿಗೆ ಬರುವಾಗ ಅಪಘಾತ
ಮಂಗಳೂರು: ಅತಿ ವೇಗವಾಗಿ ಚಲಿಸುತ್ತಿದ್ದ ಬೈಕ್ಗೆ, ಕಾರು ಡಿಕ್ಕಿ ಹೊಡೆದ ಪರಿಣಾಮ ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮುಲ್ಕಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪ್ರೀತಿಕಾ ಶೆಟ್ಟಿ (21) ಅಪಘಾತದಲ್ಲಿ ಮೃತಪಟ್ಟ ಯುವತಿ. ಕೇರಳದ ಕಾಸರಗೋಡು ಜಿಲ್ಲೆಯ ಬಾಕ್ರಬೈಲು ನಿವಾಸಿಯಾದ ಪ್ರೀತಿಕಾ ಹಾಗೂ ಬಂಟ್ವಾಳದ ಮನ್ವಿತ್ ರಾಜ್ ಎನ್ನುವರು ಬೈಕ್ನಲ್ಲಿ ವೇಗವಾಗಿ ತೆರಳುತ್ತಿದ್ದರು. ಈ ವೇಳೆ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಕಾರು, ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಯುವತಿ ನೆಲಕ್ಕೆ ಬಿದ್ದಿದ್ದಾರೆ.
ಇದನ್ನು ಓದಿ: SIIMA Awards: ಅತೀ ಹೆಚ್ಚು ಪ್ರಶಸ್ತಿ ಬಾಚಿಕೊಂಡ ಕಾಂತಾರ.. ರಕ್ಷಿತ್ ಶೆಟ್ಟಿಯ 777 ಚಾರ್ಲಿಗೆ ಏನೆಲ್ಲ ಸಿಕ್ಕಿದೆ..?
ಅಪಘಾತದಲ್ಲಿ ಯುವತಿ ತಲೆಗೆ ಗಂಭೀರವಾದ ಗಾಯವಾಗಿತ್ತು. ಹೀಗಾಗಿ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯು ಪ್ರಯತ್ನ ಮಾಡಲಾದ್ರು ಆಸ್ಪತ್ರೆ ಸೇರುವ ಮೊದಲೇ ಮೃತಪಟ್ಟಿದ್ದಾರೆ. ಇನ್ನು ಯುವಕ ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರು ಬೈಕ್ನಲ್ಲಿ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿರುವಾಗ ಈ ಅಪಘಾತ ಸಂಭವಿಸಿದೆ. ಇನ್ನು ಈ ಸಂಬಂಧ ಮುಲ್ಕಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಕಾರು-ಬೈಕ್ ನಡುವಿನ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ