/newsfirstlive-kannada/media/post_attachments/wp-content/uploads/2024/09/Sharath-pamopwel.jpg)
ಭಜರಂಗದಳ-ವಿ.ಎಚ್.ಪಿಯಿಂದ ಬಿ.ಸಿ.ರೋಡ್ ಚಲೋ ಕರೆ ಹಿನ್ನೆಲೆ ಹಿಂದು ಸಂಘಟನೆ ಕಾರ್ಯಕರ್ತರು ಬಿ.ಸಿ ರೋಡ್​​ನಲ್ಲಿ ಇಂದು ಜಮಾಯಿಸಿದ್ದಾರೆ. ಕೇಸರಿ ಶಾಲು ಹಾಕಿ ಕಾಣಿಸಿಕೊಂಡಿದ್ದಾರೆ. ಸದ್ಯ ಬಿ.ಸಿ.ರೋಡ್ ನಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಎಸ್ಪಿ ಯತೀಶ್ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಬಂದೋಬಸ್ತ್ ಮಾಡಿದ್ದಾರೆ.
/newsfirstlive-kannada/media/post_attachments/wp-content/uploads/2024/09/BC-Road.jpg)
ಭಾರೀ ಸಂಖ್ಯೆಯಲ್ಲಿ ಸೇರಿರುವ ಹಿಂದೂ ಕಾರ್ಯಕರ್ತರು
ಸದ್ಯ ಬಿ.ಸಿ.ರೋಡ್​​ನಲ್ಲಿ ಪರಿಸ್ಥಿತಿ ಬಿಗಡಾಯಿಸುವ ಆತಂಕ ಸೃಷ್ಟಿಯಾಗಿದೆ. ಭಾರೀ ಸಂಖ್ಯೆಯಲ್ಲಿ ಹಿಂದು ಸಂಘಟನೆ ಕಾರ್ಯಕರ್ತರು ಜಮಾಯಿಸಿದ್ದಾರೆ. ಬಿ.ಸಿ.ರೋಡ್​​​​​​ನ ರಕ್ತೇಶ್ವರಿ ದೇವಸ್ಥಾನದ ಬಳಿ ಜನ ಸೇರಿದ್ದಾರೆ. ಸ್ಥಳಕ್ಕೆ ಶರಣ್ ಪಂಪ್ ವೆಲ್, ಪುನೀತ್ ಅತ್ತಾವರ ಬಂದಿದ್ದಾರೆ. ಭಾರೀ ಸಂಖ್ಯೆಯಲ್ಲಿ ಪೊಲೀಸರ ನಿಯೋಜನೆ ಕೂಡ ಮಾಡಲಾಗಿದೆ. ಕೆ.ಎಸ್.ಆರ್.ಪಿ ತುಕಡಿಗಳು, ಆರ್ಮ್ ರಿಸರ್ವ್ ಫೋರ್ಸ್ ಸೇರಿದಂತೆ ವಿವಿಧ ತುಕಡಿಗಳ ಮುಕ್ಕಾಂ ಹೂಡಿವೆ. ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ.
ಇಷ್ಟಕ್ಕೆಲ್ಲ ಕಾರಣ ಏನು..?
​ಮಂಡ್ಯ ಜಿಲ್ಲೆಯ ನಾಗಮಂಗಲ ಘಟನೆ ಬೆನ್ನಲ್ಲೇ ಈದ್ ಮೆರವಣಿಗೆ ತಡೆಯುವ ಎಚ್ಚರಿಕೆಯನ್ನು ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ನೀಡಿದ್ದರು. ಅದಕ್ಕೆ ಮುಸ್ಲಿಂ ಮುಖಂಡರು ಈದ್ ಮಿಲಾದ್ ಮೆರವಣಿಗೆ ತಡೆಯುವಂತೆ ಸವಾಲೆಸೆದಿದ್ದರು. ಮುಸ್ಲಿಂ ಮುಖಂಡರ ಸವಾಲಿಗೆ ವಿಎಚ್‌ಪಿ ಮತ್ತು ಭಜರಂಗದಳ ಬಿಸಿ ರೋಡ್ ಚಲೋಗೆ ಕರೆ ಕೊಟ್ಟಿದ್ದರು. ಇದರ ನಡುವೆ ನಿನ್ನೆ ಮಂಗಳೂರು ಹೊರವಲಯದ ಕಾಟಿಪಳ್ಳ 3 ನೇ ಬ್ಲಾಕಿನ ಬದ್ರಿಯಾ ಮಸೀದಿ ಮೇಲೆ ದುಷ್ಕರ್ಮಿಗಳ ತಂಡವೊಂದು ರಾತ್ರಿ 2 ಬೈಕ್ ಗಳಲ್ಲಿ ಬಂದ ನಾಲ್ವರು ಕಲ್ಲು ತೂರಾಟ ನಡೆಸಿರುವ ಬಗ್ಗೆ ವರದಿಯಾಗಿದೆ. ಈ ಸಂಬಂಧ ಪೊಲೀಸರು ಶಿಸ್ತಿನ ಕ್ರಮ ತೆಗೆದುಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us