ಜನಿವಾರ ಬಳಿಕ ಹೊಸ ವಿವಾದ.. ನಾಳೆಯ ರೈಲ್ವೇ ಪರೀಕ್ಷೆಗೆ ಮಂಗಳಸೂತ್ರ ಇರಂಗಿಲ್ಲ..!

author-image
Veena Gangani
Updated On
ಜನಿವಾರ, ಮಾಂಗಲ್ಯ ತೆಗೆಯೋ ಆದೇಶ ವಾಪಸ್.. ರೈಲ್ವೇ ಇಲಾಖೆಯಿಂದ ಅಧಿಕೃತ ಮಾಹಿತಿ; ಏನಿದೆ?
Advertisment
  • ನಾಳೆ ದೇಶಾದ್ಯಂತ ನಡೆಯಲಿರುವ ನರ್ಸಿಂಗ್ ಸೂಪರಿಂಟೆಂಡೆಂಟ್ ಎಕ್ಸಾಂ
  • ಪರೀಕ್ಷಾ ಕೇಂದ್ರದಲ್ಲಿ ಪಾಲಿಸಬೇಕಾದ ಸೂಚನೆಗಳು ಪತ್ರದಲ್ಲಿ ಉಲ್ಲೇಖ
  • 7ನೇ ಕ್ರಮಾಂಕದ ಸೂಚನೆಯಲ್ಲಿ ಏನೆಲ್ಲಾ ಅಂಶಗಳನ್ನು ತಿಳಿಸಲಾಗಿದೆ?

ಇತ್ತೀಚೆಗೆ ರಾಜ್ಯದಲ್ಲಿ ಸಿಇಟಿ ಪರೀಕ್ಷೆ ನಡೆದಿತ್ತು. ಪರೀಕ್ಷಾರ್ಥಿಗಳು ಜನಿವಾರ ಹಾಕಿಕೊಂಡು ಬಂದಿದ್ದಕ್ಕೆ ಪರೀಕ್ಷೆಯಿಂದ ಹೊರಗುಳಿದಿದ್ದರು. ಅಲ್ಲಿನ ಸಿಬ್ಬಂದಿ ಜನಿವಾರ ತೆಗೆದುಹಾಕುವಂತೆ ಸೂಚಿಸಿರೋದು ರಾಜ್ಯಾದಂತ್ಯ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಆ ಬೆನ್ನಲ್ಲೇ ಕೇಂದ್ರ ಸರ್ಕಾರದ ರೈಲ್ವೆ ನೇಮಕಾತಿ ಮಂಡಳಿ (ಆರ್‌ಆರ್‌ಬಿ) ನಡೆಸುವ ಪರೀಕ್ಷೆಯಲ್ಲಿ ಮಂಗಳಸೂತ್ರ ಮತ್ತು ಧರ್ಮದ ಸಂಕೇತಗಳನ್ನು ಧರಿಸದಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ:ಬಿಗ್​ಬಾಸ್​ ವೀಕ್ಷಕರಿಗೆ ಶಾಕಿಂಗ್ ಸುದ್ದಿ;​ ಆರಂಭಕ್ಕೂ ಮುನ್ನವೇ ಶೋಗೆ ಭಾರೀ ಸಂಕಷ್ಟ!

publive-image

ರೈಲ್ವೆ ಇಲಾಖೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗೆ ಮಂಗಳವಾರ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರದೊಳಗೆ ಪಾಲಿಸಬೇಕಾದ ಸೂಚನೆಗಳನ್ನು ಪ್ರವೇಶ ಪತ್ರದಲ್ಲಿ ನಮೂದಿಸಲಾಗಿದೆ. ಪ್ರವೇಶ ಪತ್ರದ ಏಳನೇ ಕ್ರಮಾಂಕದ ಸೂಚನೆಯಲ್ಲಿ ಮಂಗಳಸೂತ್ರ ಧರಿಸುವಂತಿಲ್ಲ ಎಂದು ಸ್ಪಷ್ಟವಾಗಿ ಸೂಚಿಸಲಾಗಿದೆ. ಧರ್ಮದ ಸಂಕೇತ (ರಿಲಿಜಿಯಸ್​​ ಸಿಂಬಲ್ಸ್) ಗಳನ್ನು ಧರಿಸದಂತೆ ನಮೂದಿಸಲಾಗಿದೆ. ಹಾಗಾಗಿ ಬ್ರಾಹ್ಮಣ ಹಾಗೂ ಇತರ ಸಮುದಾಯದವ ಧರಿಸುವ ಜನಿವಾರ, ವೀರಶೈವರು ಧರಿಸುವ ಕರಡಿಗೆಗ ಅವಕಾಶವಿಲ್ಲವೆ ಎಂಬ ಜಿಜ್ಞಾಸೆ ಮೂಡಿದೆ. ಈ ಹಿಂದೆ ರಾಜ್ಯದಲ್ಲಿ ನಡೆದ ನೇಮಕಾತಿ ಪರೀಕ್ಷೆಯೊಂದರ ವೇಳೆ ಮಂಗಳಸೂತ್ರ ಬಿಚ್ಚಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದು ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು.

publive-image

ಆದ್ರೆ ಧರ್ಮದ ಸಂಕೇತ ಧರಿಸುವಂತಿಲ್ಲ ಎಂಬ ಸೂಚನೆಗೆ ವಿಶ್ವ ಹಿಂದೂ ಪರಿಷತ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ರೈಲ್ವೆ ಇಲಾಖೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗೆ ಏ.29ರಂದು ಬೋಂದೆಲ್‌ನ ಮಣೇಲ್ ಶ್ರೀನಿವಾಸ್ ನಾಯಕ್ ಬೆಸೆಂಟ್ ವಿದ್ಯಾಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ. ಹಿಂದೂಗಳು ಅವರ ಧಾರ್ಮಿಕ ಚಿಹ್ನೆಗಳಾದ ಮಂಗಳಸೂತ್ರ, ಜನಿವಾರ ತೆಗೆಯಲು ಹೇಳಿದರೆ ಸರಿ ಹೋಗುವುದಿಲ್ಲ. ಈ ರೀತಿಯ ಧಾರ್ಮಿಕ ವಿರೋಧಿ ಧೋರಣೆ ಸಹಿಸಲು ಅಸಾಧ್ಯ. ಜಿಲ್ಲಾಧಿಕಾರಿ, ಸಂಸದರು ಈ ಬಗ್ಗೆ ಗಮನ ಹರಿಸಿ, ಈ ಅಂಶವನ್ನು ಕೈ ಬಿಡಬೇಕು. ಪರೀಕ್ಷೆಯಲ್ಲಿ ಹಿಂದುಗಳ ಭಾವನೆಗೆ ಧಕ್ಕೆ ಬಾರದ ರೀತಿ ಪರೀಕ್ಷಾರ್ಥಿಗಳಿಗೆ ಅವಕಾಶ ಮಾಡಿಕೊಡಬೇಕು ಎಂದು ವಿಹಿಂಪ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ಒತ್ತಾಯಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment