ಅಧಿಕಾರಿಗಳಿಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಸಿಎಂ ಸೂಚನೆ
ಜನಾಂಗೀಯ ಹಿಂಸಾಚಾರದಲ್ಲಿ ಇಲ್ಲಿವರೆಗೆ 100 ಜನರು ಸಾವು
ಭದ್ರತಾ ಸಲಹೆಗಾರ ಕುಲ್ದೀಪ್ ಸಿಂಗ್ ನೀಡಿದ ಮಾಹಿತಿ ಏನೇನು?
ಇಂಫಾಲ್: ಕಳೆದ ಒಂದು ತಿಂಗಳಿನಿಂದ ಈಶಾನ್ಯ ರಾಜ್ಯ ಮಣಿಪುರದಲ್ಲಿ ಹಿಂಸಾಚಾರ ತಾಂಡವಾಡುತ್ತಿದೆ. ಉಗ್ರರ ಉಪಟಳದಿಂದ ಈಗ 9 ಮಂದಿ ಸಾವನ್ನಪ್ಪಿ, 10 ಜನರು ಗಂಭೀರವಾಗಿ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಇಲ್ಲಿವರೆಗೆ ಒಟ್ಟು 1,040 ಶಸ್ತ್ರಾಸ್ತ್ರಗಳು, 13,601 ಮದ್ದು-ಗುಂಡುಗಳು ಮತ್ತು 230 ವಿವಿಧ ರೀತಿಯ ಬಾಂಬ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಸರ್ಕಾರದ ಭದ್ರತಾ ಸಲಹೆಗಾರ ಕುಲ್ದೀಪ್ ಸಿಂಗ್ ಮಾಹಿತಿ ನೀಡಿದ್ದಾರೆ.
ಹಿಂಸಾಚಾರವು ಹತೋಟಿಗೆ ಬಂದಿದ್ದು ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕರ್ಫ್ಯೂವನ್ನು ಸ್ವಲ್ಪ ಮಟ್ಟಿಗೆ ಸಡಿಲಗೊಳಿಸಲಾಗಿದೆ. ಹೀಗಾಗಿ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಅವರು ಎಲ್ಲ ಜಿಲ್ಲೆಗಳ ಭದ್ರತಾ ಇಲಾಖೆಯ ಎಸ್‌ಎಸ್‌ಪಿ ಮತ್ತು ಓಎಸ್‌ಸಿಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಭೆ ನಡೆಸಿ ಕೆಲವು ಸೂಚನೆಗಳನ್ನು ಕೊಟ್ಟಿದ್ದಾರೆ.
ಇನ್ನು ಮಣಿಪುರದಲ್ಲಿ 1 ತಿಂಗಳ ಹಿಂದೆ ನಡೆದಿದ್ದ ಹಿಂಸಾಚಾರದಲ್ಲಿ ಮೈತೆಯಿ ಮತ್ತು ಕುಕಿ ಸಮುದಾಯದ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ ಕನಿಷ್ಠ 100 ಜನರು ಸಾವನ್ನಪ್ಪಿ, 310 ಜನರು ಗಾಯಗೊಂಡಿದ್ದರು ಎಂದು ಹೇಳಲಾಗಿದೆ. ರಾಜ್ಯದಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲು ಸೇನೆ ಮತ್ತು ಅರೆ ಮಿಲಿಟರಿ ಸಿಬ್ಬಂದಿ ಹರಸಾಹಸ ಪಟ್ಟಿದ್ದರು. ಸದ್ಯ ಈಗ ಶಸ್ತ್ರಾಸ್ತ್ರಗಳು, ಮದ್ದು-ಗುಂಡುಗಳು, 230 ವಿವಿಧ ರೀತಿಯ ಬಾಂಬ್‌ಗಳು ಸೇರಿದಂತೆ ಅಪಾಯಕಾರಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭದ್ರತಾ ಸಲಹೆಗಾರ ಕುಲ್ದೀಪ್ ಸಿಂಗ್ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ