newsfirstkannada.com

ಪತ್ನಿ ಭೇಟಿಗೆ ಮನೀಶ್ ಸಿಸೋಡಿಯಾಗೆ ಅನುಮತಿ ನೀಡಿದ ದೆಹಲಿ ಕೋರ್ಟ್​; ಏನಾಯ್ತು?

Share :

11-11-2023

    ಪತ್ನಿ ಭೇಟಿಗೆ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಅನುಮತಿ

    ಅಬಕಾರಿ ನೀತಿ ಹಗರಣದಲ್ಲಿ ಸಿಸೋಡಿಯಾಗೆ ನ್ಯಾಯಾಂಗ ಬಂಧನ

    ಸಿಎಂ ಕೇಜ್ರಿವಾಲ್ ನೇತೃತ್ವದ ಸರ್ಕಾರದಲ್ಲಿ ಡಿಸಿಎಂ ಆಗಿದ್ದ ಮನೀಶ್

ನವದೆಹಲಿ: ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರು ಬಹಳ ದಿನಗಳ ಬಳಿಕ ತಮ್ಮ ಮನೆಗೆ ಭೇಟಿ ನೀಡಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಪತ್ನಿಯನ್ನು ಭೇಟಿ ಮಾಡಲು ಮನೀಶ್ ಸಿಸೋಡಿಯಾರಿಗೆ ದೆಹಲಿ ಕೋರ್ಟ್ ಅನುಮತಿ ನೀಡಿದೆ.

ಮನೀಶ್ ಸಿಸೋಡಿಯಾ ಅವರು ತನ್ನ ಪತ್ನಿ ಸೀಮಾರನ್ನು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ಭೇಟಿ ಮಾಡಿ ಆರೋಗ್ಯವನ್ನು ವಿಚಾರಿಸಬಹುದು. 6 ಗಂಟೆಗಳ ಕಾಲ ಪತ್ನಿಯ ಆರೋಗ್ಯವನ್ನು ವಿಚಾರಿಸಬಹುದು ಎಂದು ಸಿಸೋಡಿಯಾ ಅವರಿಗೆ ರೋಸ್ ಅವೆನ್ಯೂ ಕೋರ್ಟ್ ಅನುಮತಿ ನೀಡಿದೆ. ಅಲ್ಲದೇ ಸಿಸೋಡಿಯಾ ನಿವಾಸದ ಸುತ್ತ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಈ ವೇಳೆ ರಾಜಕೀಯಕ್ಕೆ ಸಂಬಂಧಿಸಿದ ಕಾರ್ಯಗಳು ಹಾಗೂ ಮಾಧ್ಯಮದವರ ಜೊತೆ ಮಾತನಾಡದಂತೆ ಆದೇಶಿಸಿದ್ದು, ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಮತ್ತೆ ನವೆಂಬರ್​ 22ರವರೆಗೆ ವಿಸ್ತರಣೆ ಮಾಡಲಾಗಿದೆ.

ಸಿಸೋಡಿಯಾ ಅವರ ಪತ್ನಿ ಸೀಮಾ ಅವರು ಮಲ್ಟಿಪಲ್ ಸ್ಕ್ಲೆರೋಸಿಸ್‌ನಿಂದ ಬಳಲುತ್ತಿದ್ದಾರೆ. ಇತ್ತೀಚೆಗೆ ಇದು ಹೆಚ್ಚಾಗಿ ಆರೋಗ್ಯದಲ್ಲಿ ಹಠಾತ್ ಆಗಿ ಬದಲಾವಣೆಯಾಗಿದೆ. ಇದರಿಂದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೀಗಾಗಿ ಪತ್ನಿಯನ್ನು ಭೇಟಿಯಾಗಲು ಅನುಮತಿ ನೀಡುವಂತೆ ಸಿಸೋಡಿಯಾ ಅವರು ಕೋರ್ಟ್​ ಮೊರೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಅನುಮತಿ ನೀಡಲಾಗಿದೆ ಎಂದು ತಿಳಿದು ಬಂದಿದೆ. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೆಲ ತಿಂಗಳುಗಳಿಂದ ಸಿಸೋಡಿಯಾ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪತ್ನಿ ಭೇಟಿಗೆ ಮನೀಶ್ ಸಿಸೋಡಿಯಾಗೆ ಅನುಮತಿ ನೀಡಿದ ದೆಹಲಿ ಕೋರ್ಟ್​; ಏನಾಯ್ತು?

https://newsfirstlive.com/wp-content/uploads/2023/11/Sisodia.jpg

Load More