ಮನಮೋಹನ್ ಸಿಂಗ್ ಅಂತ್ಯಕ್ರಿಯೆ.. ಅಂತಿಮ ವಿಧಿವಿಧಾನ ನಾಳೆ ಯಾಕೆ ನಡೆಯುತ್ತಿದೆ ಗೊತ್ತಾ?

author-image
Bheemappa
Updated On
ಮನಮೋಹನ್ ಸಿಂಗ್ ಅಂತ್ಯಕ್ರಿಯೆ.. ಅಂತಿಮ ವಿಧಿವಿಧಾನ ನಾಳೆ ಯಾಕೆ ನಡೆಯುತ್ತಿದೆ ಗೊತ್ತಾ?
Advertisment
  • ರಾಜಕೀಯ ನಾಯಕರಿಂದ ಡಾ.ಸಿಂಗ್ ಅವರ ಅಂತಿಮ ದರ್ಶನ
  • ಆಸ್ಪತ್ರೆಯಿಂದ ಪಾರ್ಥಿವ ಶರೀರವನ್ನು ನಿವಾಸಕ್ಕೆ ತರಲಾಗಿದೆ
  • ದೇಶದ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡಿರುವ ಡಾ.ಸಿಂಗ್

ನವದೆಹಲಿ: ದೇಶದ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಕೊನೆಯುಸಿರೆಳೆದಿದ್ದು ಅವರ ಅಂತ್ಯಕ್ರಿಯೆಯನ್ನು ಡಿಸೆಂಬರ್ 28 ಅಂದರೆ ನಾಳೆ ಕುಟುಂಬಸ್ಥರು ದೆಹಲಿಯಲ್ಲಿ ನೆರವೇರಿಸಲಿದ್ದಾರೆ. ಮನಮೋಹನ್ ಸಿಂಗ್ ಅವರ ಮಗಳು ಅಮೆರಿಕದಲ್ಲಿದ್ದಾರೆ. ಹೀಗಾಗಿ ಅವರು ಬರುವುದು ತಡವಾಗುವುದರಿಂದ  ನಾಳೆ ಅಂತ್ಯಕ್ರಿಯೆ ನಡೆಸಲಾಗುತ್ತದೆ.

ಮಾಜಿ ಪ್ರಧಾನಿ, ಆರ್ಥಿಕ ಸುಧಾರಣೆಗಳ ಶಿಲ್ಪಿ ಡಾ. ಮನಮೋಹನ್ ಸಿಂಗ್ ಅವರ ಅಂತಿಮ ವಿಧಿ ವಿಧಾನಗಳನ್ನು ಡಿಸೆಂಬರ್ 28 ರಂದು ನಡೆಸಲಾಗುವುದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ತಿಳಿಸಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಧಿಕೃತ ಘೋಷಣೆ ಇನ್ನೂ ಬಾಕಿ ಇದೆ. ಆದರೆ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಯನ್ನು ನಾಳೆ ನಡೆಸಲಾಗುತ್ತದೆ. ಈ ಕುರಿತು ನಾವು ಅಧಿಕೃತವಾಗಿ ಅನೌನ್ಸ್ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ದೇಶದ ಅರ್ಥವ್ಯವಸ್ಥೆ ಸುಧಾರಣೆಯ ಶಿಲ್ಪಿ ಅಸ್ತಂಗತ.. ಸದೃಢ ಭಾರತಕ್ಕೆ ಭದ್ರ ಬುನಾದಿ ಹಾಕಿದ್ದ ಡಾ.ಸಿಂಗ್​

publive-image

92 ವರ್ಷದ ಮಾಜಿ ಪ್ರಧಾನಿಯವರು ನಿನ್ನೆ ರಾತ್ರಿ ವಿಧಿವಶರಾಗಿದ್ದಾರೆ. ಸದ್ಯ ಅವರ ಪಾರ್ಥಿವ ಶರೀರವನ್ನು ದೆಹಲಿಯ ನಿವಾಸಕ್ಕೆ ತರಲಾಗಿದೆ. ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು ರಾಜಕೀಯ ಗಣ್ಯರು ನಿವಾಸಕ್ಕೆ ಆಗಮಿಸುತ್ತಿದ್ದು ಮನಮಹೋನ್​ ಸಿಂಗ್ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಇನ್ನು ಸಿಂಗ್ ಜೊತೆಗಿನ ಒಡನಾಟವನ್ನು ಪ್ರಧಾನಿ ಮೋದಿ ಅವರು ಮೆಲುಕು ಹಾಕಿದ್ದಾರೆ. ಭಾರತ ಅತ್ಯಂತ ಗೌರವಾನ್ವಿತ ನಾಯಕರಲ್ಲಿ ಒಬ್ಬರಾದ ಡಾ. ಮನಮೋಹನ್ ಸಿಂಗ್​ರನ್ನು ಕಳೆದುಕೊಂಡಿದೆ. ವಿನಮ್ರತೆಯ ಹಾದಿಯಿಂದ ಅವರು ಗೌರವಾನ್ವಿತ ಅರ್ಥಶಾಸ್ತ್ರಜ್ಞರು ಆಗಿದ್ದರು. ಹಣಕಾಸು ಇಲಾಖೆಯ ಜೊತೆ ವಿವಿಧ ಸರ್ಕಾರಿ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಪ್ರಧಾನಿಯಾಗಿದ್ದಾಗ ಮನಮೋಹನ್ ಸಿಂಗ್ ಜನರ ಜೀವನವನ್ನು ಸುಧಾರಿಸಲು ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದರು ಎಂದು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment