/newsfirstlive-kannada/media/post_attachments/wp-content/uploads/2025/01/MANU-BHAKER.jpg)
ಒಲಿಂಪಿಕ್ಸ್ ಎರಡು ಪದಕ ವಿಜೇತೆ ಮನು ಭಾಕರ್​ ಅವರ ಅಜ್ಜಿ ಹಾಗೂ ಅಂಕಲ್ ರಸ್ತೆ ಅಪಘಾತದಲ್ಲಿ ದುರಂತವಾಗಿ ಸಾವಿಗೀಡಾಗಿದ್ದಾರೆ. ಹರಿಯಾಣದ ಚಕ್ರಿದಾದ್ರಿಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಪೊಲೀಸರು ಹೇಳುವ ಪ್ರಕಾರ ಮನು ಭಾಕರ್ ಅಜ್ಜಿ ಹಾಗೂ ಅಂಕಲ್ ದ್ವಿಚಕ್ರ ವಾಹನದಲ್ಲಿ ಪ್ರಯಾಣ ಮಾಡುತ್ತಿರುವಾಗ ಕಾರ್​ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ಹೇಳಿದ್ದಾರೆ.
/newsfirstlive-kannada/media/post_attachments/wp-content/uploads/2025/01/MANU-BHAKER-1.jpg)
ಕಾರ್ ಮತ್ತು ಸ್ಕೂಟಿ ನಡುವಿನ ಡಿಕ್ಕಿಯಿಂದಾಗಿ ಈ ಭೀಕರ ಅಪಘಾತ ಸಂಭವಿಸಿದೆ. ಸ್ಕೂಟಿಯಲ್ಲಿದ್ದ ಇಬ್ಬರೂ ವ್ಯಕ್ತಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಎಎಸ್​ಐ ಸುರೇಶ್​ ಕುಮಾರ್ ತಿಳಿಸಿದ್ದಾರೆ. ಸದ್ಯ ಕಾರ್​ನಲ್ಲಿದ್ದ ಡ್ರೈವರ್ ಎಸ್ಕೇಪ್ ಆಗಿದ್ದು. ಆತನಿಗಾಗಿ ಹುಡುಕಾಟ ನಡೆಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ:ಬಾಬ್ರಿ ಮಸೀದಿಯನ್ನು ಮತ್ತೆ ನಿರ್ಮಾಣ ಮಾಡಲು ಪಣ ತೊಟ್ಟಿರುವ ಈತ ಯಾರು? ಯುವಕರ ಹಾದಿ ಹೇಗೆ ತಪ್ಪಿಸುತ್ತಿದ್ದಾನೆ?
ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಎರಡು ಪದಕ ಗೆಲ್ಲುವ ಮೂಲಕ ಮನು ಭಾಕರ್ ಇತಿಹಾಸ ಸೃಷ್ಟಿಸಿದ್ದರು. ಸ್ವಾತಂತ್ರ್ಯ ನಂತರ ಒಂದೇ ಒಲಿಂಪಿಕ್ಸ್​ನಲ್ಲಿ ಎರಡು ಪದಕ ಗೆದ್ದ ಮೊದಲ ವಿಜೇತೆಯಾಗಿ ಮನು ಭಾಕರ್ ಗುರುತಿಸಿಕೊಂಡಿದ್ದರು. 10ಎಂ ಏರ್​ಪಿಸ್ತೂಲ್​ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದ ಮನು ಭಾಕರ್, ನಂತರ ಡಬಲ್ಸ್​​​ನಲ್ಲಿ ಸರಬ್ಜೋತ್ ಸಿಂಗ್ ಜೊತೆ ಸೇರಿ 10 ಎಂ ಏರ್​ ಪಿಸ್ತೂಲ್ ಸ್ಪರ್ಧೆಯಲ್ಲಿಯೂ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us