ಲಾರಿ, ಬಸ್​ ಮಧ್ಯೆ ಭೀಕರ ಅಪಘಾತ; ಹಲವು ಪ್ರಯಾಣಿಕರಿಗೆ ಗಂಭೀರ ಗಾಯ

author-image
Ganesh Nachikethu
Updated On
ಲಾರಿ, ಬಸ್​ ಮಧ್ಯೆ ಭೀಕರ ಅಪಘಾತ; ಹಲವು ಪ್ರಯಾಣಿಕರಿಗೆ ಗಂಭೀರ ಗಾಯ
Advertisment
  • ಭತ್ತ ಕಟಾವು ಯಂತ್ರ ಕೊಂಡೊಯ್ಯುತಿದ್ದ ತಮಿಳುನಾಡು ಲಾರಿ
  • ಇಂದು ಬಸ್​ಗೆ ಲಾರಿ ಡಿಕ್ಕಿಯಾದ ಪರಿಣಾಮ ಭೀಕರ ಅಪಘಾತ
  • ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ಖಾಸಗಿ ಬಸ್..!

ಶಿವಮೊಗ್ಗ: ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಈ ಆ್ಯಕ್ಸಿಡೆಂಟ್​ನಲ್ಲಿ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವಲ್ಲಿ ಎಲ್ಲಾ ಪ್ರಯತ್ನಗಳು ವಿಫಲವಾಗಿವೆಯಾ? ಹಾಗಿದ್ರೆ ಈ ನಿಯಮಗಳನ್ನು ಪಾಲಿಸಿ

ಇನ್ನು, ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಬಸ್​​ಗೆ ಲಾರಿ ಡಿಕ್ಕಿ ಆಗಿದೆ. ಹೊಸನಗರದಿಂದ ಬರುತಿದ್ದ ಭತ್ತ ಕಟಾವು ಯಂತ್ರವನ್ನು ಕೊಂಡೊಯ್ಯುತಿದ್ದ ತಮಿಳುನಾಡಿನ ಲಾರಿ ಇದಾಗಿದೆ. ಲಾರಿ ಡಿಕ್ಕಿ ಹೊಡೆಯುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಬಸ್​ ಪಲ್ಟಿಯಾಗಿದೆ. ಬಸ್​ನಲ್ಲಿ 20 ಪ್ರಯಾಣಿಕರಿದ್ದು 15 ಜನರು ಗಾಯಗೊಂಡಿದ್ದಾರೆ ಎನ್ನಲಾಗುತಿದ್ದು, ಗಾಯಾಳುಗಳನ್ನು ರಿಪ್ಪನ್‌ಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಮಯ ಪ್ರಜ್ಞೆ ಮೆರೆದ ಪೊಲೀಸರು

ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸ್ಥಳೀಯರು ಆಂಬುಲೆನ್ಸ್​ಗೆ ಕರೆ ಮಾಡಿದ್ರು. ಕರೆ ಮಾಡಿ ತುಂಬಾ ಸಮಯವಾದರೂ ಆಂಬುಲೆನ್ಸ್ ಬರಲಿಲ್ಲ. ಈ ವೇಳೆ ಸ್ಥಳಕ್ಕೆ ಆಗಮಿಸಿದ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಹಾಗೂ ಸಿಬ್ಬಂದಿ ಗಾಯಾಳುಗಳನ್ನು ಪೊಲೀಸ್ ಜೀಪ್ ನಲ್ಲಿಯೇ ಕರೆದೊಯ್ಯುವ ಮೂಲಕ ಸಮಯ ಪ್ರಜ್ಞೆ ಮೆರೆದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment