ಈ ಕಾರಣಕ್ಕೆ ಕೊನೆ ಕ್ಷಣದಲ್ಲಿ ಮುರಿದುಬಿತ್ತು ಮದುವೆ
ನಿನ್ನೆ ರಿಸೆಪ್ಷನ್ ವೇಳೆ ವಧು ನಗುತ್ತಲೇ ಇದ್ದಳು
ಕೊಳಾಲ ಪೊಲೀಸ್ ಠಾಣೆಯಲ್ಲಿ ರಾಜೀ ಮಾತುಕತೆ
ತಾಳಿ ಕಟ್ಟುವ ವೇಳೆ ಮದುವೆ ಬೇಡ ಎಂದು ವಧು ಹಸೆಮಣೆಯಿಂದ ಎದ್ದು ಹೋಗಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕೋಳಾಲ ಗ್ರಾಮದಲ್ಲಿ ನಡೆದಿದೆ. ಬೇರೊಬ್ಬನನ್ನು ಪ್ರೀತಿಸುತ್ತಿದ್ದೇನೆ ಎಂದು ವಧು ಹಸೆಮಣೆಯಿಂದ ಎದ್ದು ಬಂದಿದ್ದು, ಮಂಟಪದಲ್ಲಿ ಗದ್ದಲ ಉಂಟಾಗಿದೆ.
ನಿನ್ನೆ ರಿಸೆಪ್ಷನ್ ವೇಳೆ ವಧು ನಗುತ್ತಲೇ ಇದ್ದಳು, ಆದ್ರೆ ಈಕೆಯ ಈ ದಿಢೀರ್ ನಿರ್ಧಾರ ಎರಡೂ ಕುಟುಂಬದವರ ನಡುವಿನ ಗದ್ದಲಕ್ಕೆ ಕಾರಣವಾಗಿದೆ. ಕೊಳಾಲ ಗ್ರಾಮದ ಕೆ.ಸಿ.ಎನ್. ಕನ್ವೆನ್ಷನ್ ಹಾಲ್ನಲ್ಲಿ ಮದುವೆ ನಡೆಯುತ್ತಿತ್ತು. ವೆಂಕಟೇಶ್ ಎಂಬುವವರ ಜೊತೆ ಮದುವೆ ನಡೆಯುತ್ತಿತ್ತು.
ಬೆಳಗ್ಗೆ ಮುಹೂರ್ತಕ್ಕೆ ಬರುತ್ತಿದ್ದಂತೆ ಮದುವೆ ಬೇಡ ಎಂದ ಯುವತಿ ಹಠ ಹಿಡಿದಿದ್ದಾಳೆ. ಈ ಹಿನ್ನೆಲೆಯಲ್ಲಿ ಎರಡು ಕಡೆಯವರಿಂದ ಮಾತಿನ ಚಕಮಕಿ ನಡೆದಿದೆ. ಸದ್ಯ ಕೊಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಮಾತುಕತೆ ನಡೆಯುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ