/newsfirstlive-kannada/media/post_attachments/wp-content/uploads/2025/05/Hyderabad_Fire_NEW.jpg)
ಹೈದರಾಬಾದ್: ನಗರದ ಚಾರ್‌ಮಿನಾರ್ ಬಳಿ ಇರುವ ಗುಲ್ಜಾರ್ ಹೌಸ್‌ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿ ಮಕ್ಕಳು, ಮಹಿಳೆಯರು ಸೇರಿ 17 ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಈ ಭೀಕರ ದುರಂತ ಸಂಭಿಸಿದೆ ಎಂದು ಕೇಂದ್ರ ಸಚಿವ ಹಾಗೂ ತೆಲಂಗಾಣ ರಾಜ್ಯ ಬಿಜೆಪಿ ಅಧ್ಯಕ್ಷ ಜಿ. ಕಿಶನ್ ರೆಡ್ಡಿ ಅವರು ತಿಳಿಸಿದ್ದಾರೆ.
ಹೈದರಾಬಾದ್ನ ಚಾರ್‌ಮಿನಾರ್ ಬಳಿ ಇರುವ ಗುಲ್ಜಾರ್ ಹೌಸ್‌ನಲ್ಲಿ ನಡೆದ ಭೀಕರ ಅಗ್ನಿ ದುರಂತದಲ್ಲಿ ಒಟ್ಟು 17 ಜನ ಪ್ರಾಣ ಬಿಟ್ಟಿದ್ದಾರೆ. ಘಟನೆ ನಡೆದ ಸ್ಥಳದಲ್ಲೇ ನಾಲ್ವರು ಸಜೀವದಹನವಾಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ 7 ಜನರು ಮೃತಪಟ್ಟಿದ್ದಾರೆ. ಇದರಲ್ಲಿ ಮಕ್ಕಳು, ಇಬ್ಬರು ಮಹಿಳೆಯರು ಹಾಗೂ ಮೂವರು ಪುರುಷರು ಸೇರಿದ್ದಾರೆ. ಇನ್ನಷ್ಟು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಗಾಯಗೊಂಡವರನ್ನು ಮಲಕಪೇಟೆಯ ಯಶೋಧ ಆಸ್ಪತ್ರೆ, ಅಪೋಲೋ, ಡಿಆರ್ಟಿಒ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗುಲ್ಜಾರ್ ಹೌಸ್ಗೆ ಬೆಂಕಿ ಬಿದ್ದಿದೆ ಎನ್ನುವ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಈ ವೇಳೆ ಕೆಲವರನ್ನು ರಕ್ಷಣೆ ಮಾಡಿ ಆ್ಯಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಗುಲ್ಜಾರ್ ಹೌಸ್‌ನಲ್ಲಿ 30ಕ್ಕೂ ಹೆಚ್ಚು ಜನರು ಇದ್ದರು ಎಂದು ಹೇಳಲಾಗುತ್ತಿದೆ. ಇದರಲ್ಲಿ 17 ಜನರು ಮೃತಪಟ್ಟಿದ್ದಾರೆ. ಬೆಂಕಿ ದೊಡ್ಡ ಮಟ್ಟದಲ್ಲಿ ಹೊತ್ತಿಕೊಂಡಿದ್ದರಿಂದ ಸುತ್ತಮುತ್ತಲಿನ ಪ್ರದೇಶಕ್ಕೆ ದಟ್ಟ ಹೊಗೆ ಆವರಿಸಿತ್ತು. ಇದನ್ನು ಗಮನಿಸಿದ್ದ ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. 4 ಮಂದಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆಗೆ ದಾಖಲಿಸಿದವರ ಪೈಕಿ ಇನ್ನು ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.
ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ