/newsfirstlive-kannada/media/post_attachments/wp-content/uploads/2025/01/GILL.jpg)
ಟೀಮ್ ಇಂಡಿಯಾ, ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟಿ20 ಸರಣಿ ಶುರುವಾಗಲಿದೆ. ಇದೇ ತಿಂಗಳು ಜನವರಿ 20ನೇ ತಾರೀಕು ಶುರುವಾಗಲಿರೋ ಟಿ20 ಸರಣಿಗೆ ಬಲಿಷ್ಠ ಟೀಮ್ ಇಂಡಿಯಾ ಪ್ರಕಟಿಸಲಾಗಿದೆ.
ಹಲವು ವರ್ಷಗಳ ಬಳಿಕ ಟೀಮ್ ಇಂಡಿಯಾಗೆ ಸೂಪರ್ ಸ್ಟಾರ್ ಬೌಲರ್ ಮೊಹಮ್ಮದ್ ಶಮಿ ಕಮ್ಬ್ಯಾಕ್ ಮಾಡಿದ್ದಾರೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ. ಸಂಜು ಸ್ಯಾಮ್ಸನ್ ಹಾಗೂ ಧೃವ್ ಜುರೇಲ್ ವಿಕೆಟ್ ಕೀಪರ್ ಆಗಿ ಕಾಣಿಸಿಕೊಂಡಿದ್ದಾರೆ. ಇದರ ಮಧ್ಯೆ ಟೀಮ್ ಇಂಡಿಯಾ ಉಪನಾಯಕನಿಗೆ ಕೊಕ್ ನೀಡಲಾಗಿದೆ.
ಶುಭ್ಮನ್ ಗಿಲ್ ಔಟ್!
ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯಿಂದ ಟೀಮ್ ಇಂಡಿಯಾ ಉಪನಾಯಕ ಶುಭ್ಮನ್ ಗಿಲ್ಗೆ ಕೊಕ್ ನೀಡಲಾಗಿದೆ. ಅಂದರೆ ಟಿ20 ಸರಣಿಯಿಂದ ಕೈ ಬಿಡುತ್ತಿಲ್ಲ, ಬದಲಿಗೆ ಗಿಲ್ ಅವರಿಗೆ ರೆಸ್ಟ್ ನೀಡೋ ಸಾಧ್ಯತೆ ಇದೆ. ಇಂಗ್ಲೆಂಡ್ ವಿರುದ್ಧದ ಏಕದಿನ ಟೆಸ್ಟ್ ಸರಣಿ ಗಮನದಲ್ಲಿಟ್ಟುಕೊಂಡು ಗಿಲ್ಗೆ ರೆಸ್ಟ್ ಕೊಡಲಾಗಿದೆ.
ಅಕ್ಷರ್ ಪಟೇಲ್ಗೆ ಉಪನಾಯಕನ ಪಟ್ಟ
ಮಹತ್ವದ ಟಿ20 ಸರಣಿಗೆ ಯುವ ಆಟಗಾರರಿಗೆ ಮಣೆ ಹಾಕಲಾಗಿದೆ. ಸರಣಿಯಲ್ಲಿ ಯುವ ಆಟಗಾರರು ತಮ್ಮ ಕ್ಷಮತೆಯನ್ನು ಸಾಬೀತು ಪಡಿಸಲಿದ್ದಾರೆ. ಗಿಲ್ ಬದಲಿಗೆ ಸ್ಟಾರ್ ಆಲ್‌ರೌಂಡರ್ ಅಕ್ಷರ್ ಪಟೇಲ್ ಅವರಿಗೆ ಉಪನಾಯಕ ಪಟ್ಟ ಕಟ್ಟಲಾಗಿದೆ. ತಂಡದಲ್ಲಿ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಸ್ಥಾನ ಪಡೆದಿದ್ದಾರೆ.
ಟಿ20 ಸರಣಿಗೆ ಭಾರತ ತಂಡ ಹೀಗಿದೆ!
ಸೂರ್ಯಕುಮಾರ್ ಯಾದವ್ (ಕ್ಯಾಪ್ಟನ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್ (ಉಪನಾಯಕ), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್ , ವಾಷಿಂಗ್ಟನ್ ಸುಂದರ್, ಧ್ರುವ್ ಜುರೆಲ್ (ವಿಕೆಟ್ ಕೀಪರ್).
ಇದನ್ನೂ ಓದಿ:ಕೊಹ್ಲಿ, ರೋಹಿತ್ಗೆ ಕೊನೆಯ ಅವಕಾಶ; ಸ್ಟಾರ್ ಆಟಗಾರರಿಗೆ ಬಿಸಿಸಿಐ ಕೊಟ್ಟ ಖಡಕ್ ವಾರ್ನಿಂಗ್ ಏನು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ