ಥಿಯೇಟರ್ನಲ್ಲಿ ಮಿಸ್ ಮಾಡ್ಕೊಂಡವ್ರಿಗೆ ಇಲ್ಲಿದೆ ಅವಕಾಶ
ಮೇ 30 ರಂದು ಎರಡು ಭಾಷೆಯಲ್ಲಿ ರಿಲೀಸ್ ಆಗಿದ್ದ ಚಿತ್ರ
ಎಂ. ಎಸ್. ರಾಜು ನಿರ್ದೇಶನದ ‘ಮತ್ತೆ ಮದುವೆ’
ತೆಲುಗಿನ ನಟ ನರೇಶ್ ಕೃಷ್ಣ ಹಾಗೂ ಪವಿತ್ರಾ ಲೋಕೇಶ್ ಅಭಿನಯದ ಮತ್ತೆ ಮದುವೆ ಸಿನಿಮಾ ಒಟಿಟಿ ಎಂಟ್ರಿಗೆ ಮುಹೂರ್ತ ಫಿಕ್ಸ್ ಆಗಿದೆ. ಇದೇ ತಿಂಗಳ 23ಕ್ಕೆ ಪ್ರತಿಷ್ಠಿತ ಒಟಿಟಿ ಅಮೇಜಾನ್ ಪ್ರೈಮ್ನಲ್ಲಿ ಸಿನಿಮಾ ಕಣ್ತುಂಬಿಕೊಳ್ಳಬಹುದಾಗಿದೆ.
ತೆಲುಗು ಹಾಗೂ ಕನ್ನಡ ಎರಡು ಭಾಷೆಯಲ್ಲಿ ಮೂಡಿಬಂದಿದ್ದ ಮತ್ತೆ ಮದುವೆಗೆ ಥಿಯೇಟರ್ನಲ್ಲಿ ಭರಪೂರ ಮೆಚ್ಚುಗೆ ವ್ಯಕ್ತವಾಗಿತ್ತು. ತೆಲುಗಿನಲ್ಲಿ ಮಳ್ಳಿಪೆಳ್ಳಿ ಎಂಬ ಟೈಟಲ್ ನಡಿ ಮೇ 26ರಂದು ಬಿಡುಗಡೆಯಾಗಿತ್ತು. ಟಾಲಿವುಡ್ ನಲ್ಲಿ ಒಳ್ಳೆ ರೆಸ್ಪಾನ್ಸ್ ಸಿಕ್ಕ ಬೆನ್ನಲ್ಲೆ ಕನ್ನಡದಲ್ಲಿ ಮತ್ತೆ ಮದುವೆ ಎಂಬ ಶೀರ್ಷಿಕೆಯಡಿ ಜೂನ್ 9ರಂದು ತೆರೆಕಂಡಿತ್ತು. ಕನ್ನಡ ಸಿನಿಪ್ರಿಯರು ಹಾಗೂ ಸಿನಿತಾರೆಯರು ಮೆಚ್ಚಿದ್ದ ನರೇಶ್ ಹಾಗೂ ಪವಿತ್ರಾ ಲೋಕೇಶ್ ಸಿನಿಮಾ ಅಮೇಜಾನ್ ಪ್ರೈಮ್ ನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ.
ನರೇಶ್ ತಾಯಿ, ಹಿರಿಯ ನಟಿ, ನಿರ್ದೇಶಕಿ ವಿಜಯಾ ನಿರ್ಮಲಾ ಅವರು 1973ರಲ್ಲಿ ‘ಸೂಪರ್ ಸ್ಟಾರ್’ ಕೃಷ್ಣ ಅವರ ಜತೆಗೂಡಿ ವಿಜಯ ಕೃಷ್ಣ ಮೂವೀಸ್ ಆರಂಭಿಸಿದ್ದರು. ಆ ಬ್ಯಾನರ್‌ಗೆ ಭರ್ತಿ 50 ವರ್ಷ ತುಂಬಿದೆ. ಆ ಹಿನ್ನೆಲೆಯಲ್ಲಿ ಆ ಬ್ಯಾನರ್ ಮೂಲಕ ಮತ್ತೆ ಮದುವೆ ಸಿನಿಮಾವನ್ನು ನರೇಶ್ ನಿರ್ಮಾಣ ಮಾಡಿದ್ದರು. ಚಿತ್ರಕ್ಕೆ ಎಂ. ಎಸ್. ರಾಜು, ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದು, ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದರು.
ವನಿತಾ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ, ಮಧು ಹಾಗೂ ಇನ್ನಿತರರು ಮತ್ತೆ ಮದುವೆಯ ಭಾಗವಾಗಿದ್ದರು. ಬೋಲ್ಡೆಸ್ಸ್ ಜೋಡಿಯ ಫ್ಯಾಮಿಲಿ ಎಂಟರ್ಟೈನ್ಮೆಂಟ್ ಕಹಾನಿಯನ್ನು ಥಿಯೇಟರ್ ನಲ್ಲಿ ಮಿಸ್ ಮಾಡಿಕೊಂಡವರು ಅಮೇಜಾನ್ನಲ್ಲಿ ನೋಡಬಹುದು.
ವಿಶೇಷ ಸೂಚನೆ: ಸಿನಿಮಾ ಲೋಕದ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ಫಿಲ್ಮಿ ಫಸ್ಟ್’ ಪ್ರತಿದಿನ ಸಂಜೆ 5.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್