ನೂತನ ಸಚಿವರ ಪ್ರಮಾಣವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್..!
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಜೊತೆ ಹೈಕಮಾಂಡ್ ನಾಯಕರ ಸಭೆ
24 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ!
ಬೆಂಗಳೂರು: ಮೇ 27ರಂದು (ಶನಿವಾರ) ಅಂದರೆ ನಾಡಿದ್ದು ಸಿದ್ದರಾಮಯ್ಯ ಸರ್ಕಾರದ ಸಂಪುಟ ವಿಸ್ತರಣೆ ನಡೆಯಲಿದೆ. ಶನಿವಾರ ಬೆಳಗ್ಗೆ 11.45ಕ್ಕೆ ಪದಗ್ರಹಣ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಇದಕ್ಕೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ. ಅದರಂತೆ ನೂತನ ಸಚಿವರಿಗೆ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈಗಾಗಲೇ ದೆಹಲಿಗೆ ಹೋಗಿದ್ದಾರೆ. ಇವರ ಬೆನ್ನಲ್ಲೇ ಕೆಲವು ನಾಯಕರು ಸಚಿವ ಸ್ಥಾನಕ್ಕೆ ಲಾಬಿ ಮಾಡಲು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಸಿದ್ದರಾಮಯ್ಯ ಮತ್ತು ಶಿವಕುಮಾರ್ ಜೊತೆ ಹೈಕಮಾಂಡ್ ನಾಯಕರು ಸಭೆ ಮೇಲೆ ಸಭೆ ನಡೆಸುತ್ತಿದ್ದಾರೆ. ಇವತ್ತು ರಾತ್ರಿಯವರೆಗೂ ಯಾವುದೇ ಫೈನಲ್ ಆಗಿಲ್ಲ. ನಾಳೆ ಸಂಜೆ ವೇಳೆಗೆ ಹೈಕಮಾಂಡ್ ನಾಯಕರು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ. ನಾಡಿದ್ದು ಸುಮಾರು 20 ರಿಂದ 24 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡುವ ಸಾಧ್ಯತೆ ಇದೆ.
ಸಚಿವರಾಗುವ ಸಂಭವನೀಯರ ಲಿಸ್ಟ್..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ