/newsfirstlive-kannada/media/post_attachments/wp-content/uploads/2025/05/Chaithra-Kundapura.jpg)
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11ರ ಇಬ್ಬರು ಸ್ಪರ್ಧಿಗಳು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಒಂದು ರಂಜಿತ್ ಕುಮಾರ್, ಮತ್ತೊಂದು ಫೈರ್ ಬ್ರ್ಯಾಂಡ್ ಅಂತಲೇ ಫೇಮಸ್ ಆಗಿರೋ ಚೈತ್ರಾ ಕುಂದಾಪುರ.
ನಟ ರಂಜಿತ್ ಕುಮಾರ್ ಅವರದ್ದು ಮೇ 11ರಂದು ಮದುವೆ. ಇನ್ನೂ ಚೈತ್ರಾ ಕುಂದಾಪುರ ಅವರದ್ದು ನಾಳೆ ಅಂದರೆ ಮೇ 9ಕ್ಕೆ ಮದುವೆ ನಡೆಯಲಿದೆ. ಈಗ ಚೈತ್ರಾ ಕುಂದಾಪುರ ಅವರ ಮೆಹಂದಿ ಕಾರ್ಯಕ್ರಮದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಹೀಗಾಗಿ ಚೈತ್ರಾ ಕುಂದಾಪುರ ಅವರ ಭಾವಿ ಪತಿಯನ್ನು ನೋಡಲು ಅಭಿಮಾನಿಗಳು ಕಾತುರರಾಗಿದ್ದಾರೆ. ಆದ್ರೆ ಇಲ್ಲಿಯವರೆಗೂ ಚೈತ್ರಾ ಕುಂದಾಪುರ ತಮ್ಮ ಭಾವಿ ಪತಿಯನ್ನು ಪರಿಚಯ ಮಾಡಿಲ್ಲ. ಹೀಗಾಗಿ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ.
View this post on Instagram
ಬಿಗ್ಬಾಸ್ ಸೀಸನ್ 11ಕ್ಕೆ ಎಂಟ್ರಿ ಕೊಟ್ಟ ಬಳಿಕ ಬಾಯ್ಸ್ vs ಗರ್ಲ್ಸ್ ರಿಯಾಲಿಟಿ ಶೋಗಳಲ್ಲಿ ಭಾಗಿಯಾಗಿದ್ದರು. ಈ ಶೋ ಮುಗಿಯುತ್ತಿದ್ದಂತೆ ಚೈತ್ರಾ ಕುಂದಾಪುರ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಸದ್ಯ ಮದುವೆ ಕಾರ್ಯಕ್ರಮದಲ್ಲಿ ಬ್ಯುಸಿ ಇರೋ ಚೈತ್ರಾ ಅವರ ಮೆಹೆಂದಿ ಕಾರ್ಯಕ್ರಮದ ಫೋಟೋಗಳನ್ನು ನೋಡಿದ ಅಭಿಮಾನಿಗಳು ಅವರಿಗೆ ಶುಭ ಹಾರೈಸುತ್ತಿದ್ದಾರೆ.
ಇನ್ನೂ, ಚೈತ್ರಾ ಕುಂದಾಪುರ ಅವರು ಮಂಗಳೂರು ಕಮಲಶಿಲೆ ಶ್ರೀ ದುರ್ಗಾ ದುರ್ಗಾಪರಮೇಶ್ವರಿ ಕುಂದಾಪುರದಲ್ಲಿ ಮೆಚ್ಚಿದ ಹುಡುಗನ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈಗಾಗಲೇ ಕಿರುತೆರೆ ನಟ ನಟಿಯರು ಸೇರಿದಂತೆ ಹಲವಾರು ಗಣ್ಯರನ್ನು ಚೈತ್ರಾ ಕುಂದಾಪುರ ಅವರು ಆಹ್ವಾನಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ