/newsfirstlive-kannada/media/post_attachments/wp-content/uploads/2025/01/MODI-3.jpg)
ಉತ್ತರ ಪ್ರದೇಶದ ಪ್ರಯಾಗ್ರಾಜ್ನ ತ್ರಿವೇಣಿ ಸಂಗಮದಲ್ಲಿ ಮಹಾಕುಂಭ ನಡೆಯುತ್ತಿದೆ. ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮಕ್ಕೆ ದೇಶ, ವಿದೇಶಗಳಿಂದಲೂ ಭಕ್ತರು ಆಗಮಿಸುತ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಕೂಡ ಮಹಾಕುಂಭದ ಪವಿತ್ರ ಸ್ನಾನಕ್ಕೆ ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.
ಮೋದಿ ಅವರು ಫೆಬ್ರವರಿ 5 ರಂದು ಪ್ರಯಾಗರಾಜ್ಗೆ ಭೇಟಿ ನೀಡಲಿದ್ದಾರೆ. ಪ್ರಮುಖ ಸರ್ಕಾರಿ ಯೋಜನೆಗಳನ್ನು ಪರಿಶೀಲಿಸುವ ಮತ್ತು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆಯಿದೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಭದ್ರತೆಗಾಗಿ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ. ನಿಗದಿತ ಸಮಯದಲ್ಲಿ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.
ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ಸಿಡಿದ ಆರು ಸಿಲಿಂಡರ್ಗಳು.. 300 ಟೆಂಟ್ಗಳು ಸುಟ್ಟು ಭಸ್ಮ
ಜನವರಿ 22 ರಂದು ಉತ್ತರ ಪ್ರದೇಶದ ಯೋಗಿ ಸರ್ಕಾರ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಮಹಾಕುಂಭ ವಿಚಾರ ಚರ್ಚೆಗೆ ಬರಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 27 ರಂದು ಮಹಾಕುಂಭದಲ್ಲಿ ಭಾಗವಹಿಸಲಿದ್ದಾರೆ. ಫೆಬ್ರವರಿ 1 ರಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ತ್ರಿವೇಣಿ ಸಂಗಮಕ್ಕೆ ಬರಲಿದ್ದಾರೆ. ಫೆಬ್ರವರಿ 10 ರಂದು ರಾಷ್ಟ್ರಪತಿಗಳು ಆಗಮಿಸುವ ನಿರೀಕ್ಷೆ ಇದೆ.
ಭದ್ರತಾ ವ್ಯವಸ್ಥೆಗೆ ವಿಶೇಷ ಕ್ರಮ..
ವಿಐಪಿಗಳ ಭೇಟಿ ಗಮನದಲ್ಲಿಟ್ಟುಕೊಂಡು ಉತ್ತರ ಪ್ರದೇಶ ಪೊಲೀಸರು ಭದ್ರತೆಯನ್ನು ಬಿಗಿಗೊಳಿಸಿದ್ದಾರೆ. ಪ್ರಮುಖ ಸ್ಥಳಗಳಲ್ಲಿ ಭದ್ರತಾ ಪಡೆಗಳ ನಿಯೋಜನೆಯನ್ನು ಹೆಚ್ಚಿಸಲಾಗಿದೆ. ವಿಶೇಷ ಭದ್ರತಾ ತಂಡಗಳನ್ನು ಸಕ್ರಿಯಗೊಳಿಸಲಾಗಿದೆ. ಡ್ರೋನ್ ಮತ್ತು ಸಿಸಿಟಿವಿ ಕ್ಯಾಮೆರಾಗಳ ಮೂಲಕ ಕಣ್ಗಾವಲು ಇಡಲಾಗಿದೆ.
ಇದನ್ನೂ ಓದಿ: ಮಹಾಕುಂಭಮೇಳದ ಮೊನಾಲಿಸಾ ದಿಢೀರ್ ಕಣ್ಮರೆ ಯಾಕೆ? ವೈರಲ್ ಹುಡುಗಿಗೆ ಆಗಿದ್ದೇನು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ