/newsfirstlive-kannada/media/post_attachments/wp-content/uploads/2024/12/Mayank-Agarwal.jpg)
ಬಹುನಿರೀಕ್ಷಿತ 2024ರ ವಿಜಯ್ ಹಜಾರೆ ಟ್ರೋಫಿ ಟೂರ್ನಿ ನಡೆಯುತ್ತಿದೆ. ಟೀಮ್ ಇಂಡಿಯಾದಿಂದ ಹಲವು ವರ್ಷಗಳಿಂದ ದೂರ ಉಳಿದಿರೋ ಸ್ಟಾರ್ ಪ್ಲೇಯರ್ ಈ ದೇಶೀಯ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ.
ಒಂದೆಡೆ ಕ್ಯಾಪ್ಟನ್ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯಂತಹ ಅನುಭವಿ ಬ್ಯಾಟರ್ಗಳೇ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ಇನ್ನೊಂದೆಡೆ ಟೀಮ್ ಇಂಡಿಯಾದಿಂದ ಹೊರಗುಳಿದಿರೋ ಆಟಗಾರರು ಭರ್ಜರಿ ಕಮ್ಬ್ಯಾಕ್ ಮಾಡಿದ್ದಾರೆ. ಅದರಲ್ಲೂ 2025ರ ಐಪಿಎಲ್ ಹರಾಜಿನಲ್ಲಿ ಸೇಲ್ ಆಗದ ಕರ್ನಾಟಕ ಆಟಗಾರ ಮಯಾಂಕ್ ಅಗರ್ವಾಲ್ ತನ್ನ ಸಾಮರ್ಥ್ಯ ತೋರಿಸಿದ್ದಾರೆ.
ಹ್ಯಾಟ್ರಿಕ್ ಶತಕ ಚಚ್ಚಿದ ಮಯಾಂಕ್
ಕರ್ನಾಟಕ ತಂಡದ ಕ್ಯಾಪ್ಟನ್ ಮಯಾಂಕ್ ಅಗರ್ವಾಲ್. ಇವರು ವಿಜಯ್ ಹಜಾರೆ ಟ್ರೋಫಿ 2024ರ ಟೂರ್ನಿಯಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ಮಾಡುತ್ತಿದ್ದಾರೆ. ಸತತ ಮೂರು ಪಂದ್ಯಗಳಲ್ಲಿ ಬ್ಯಾಕ್ ಟು ಬ್ಯಾಕ್ ಶತಕ ಸಿಡಿಸಿದ್ದಾರೆ.
ಇಂದು ಕರ್ನಾಟಕ ಮತ್ತು ಹೈದರಾಬಾದ್ ನಡುವೆ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಮಯಾಂಕ್ ಅಗರ್ವಾಲ್ ಅಮೋಘ ಶತಕ ಚಚ್ಚಿದ್ರು. ತಾನು ಎದುರಿಸಿದ 112 ಎಸೆತಗಳಲ್ಲಿ 15 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 124 ರನ್ ಗಳಿಸಿದ್ದಾರೆ. ಈ ಮೂಲಕ ಮಾಯಾಂಕ್ ಟೀಕಾಕಾರರಿಗೆ ತಕ್ಕ ಉತ್ತರ ನೀಡಿದ್ರು.
ಇದನ್ನೂ ಓದಿ:2025ರ ಐಪಿಎಲ್; ಆರ್ಸಿಬಿ ಸೇರಿದ ಬೆನ್ನಲ್ಲೇ ಕನ್ನಡಿಗ ದೇವದತ್ ಪಡಿಕ್ಕಲ್ಗೆ ಶಾಕಿಂಗ್ ನ್ಯೂಸ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ