/newsfirstlive-kannada/media/post_attachments/wp-content/uploads/2024/04/MAYANK-YADAV.jpg)
ಮಯಾಂಕ್ ಯಾದವ್ ಮತ್ತೊಮ್ಮೆ ವೇಗದ ಬೌಲಿಂಗ್ ಮೂಲಕ ಕ್ರಿಕೆಟ್ ಜಗತ್ತಿನ ಗಮನ ಸೆಳೆದಿದ್ದಾರೆ.
ನಿನ್ನೆ ನಡೆದ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಗಂಟೆಗೆ 157 ಕಿಮೀ ವೇಗದಲ್ಲಿ ಬೌಲಿಂಗ್ ಮಾಡಿ ದಾಖಲೆ ಸೃಷ್ಟಿಸಿದ್ದಾರೆ. ಮೊದಲ ಪಂದ್ಯದಲ್ಲೇ ತಮ್ಮ ವೇಗದ ಬೌಲಿಂಗ್ ಮೂಲಕ ಕ್ರಿಕೆಟ್ ಜಗತ್ತನ್ನೇ ದಂಗಾಗಿಸಿದ್ದ ಮಯಾಂಕ್ ಯಾದವ್, ನಿನ್ನೆಯ ಪಂದ್ಯದಲ್ಲೂ ಅಬ್ಬರಿಸಿದ್ದಾರೆ. ಈ ಪಂದ್ಯದಲ್ಲಿ ಗಂಟೆಗೆ 157 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡುವ ಮೂಲಕ ಸೈ ಎನಿಸಿಕೊಂಡಿದ್ದಾರೆ.. ಆರ್​ಸಿಬಿ ತಂಡದ 3 ವಿಕೆಟ್​ ಕಬಳಿಸಿ, ಮ್ಯಾನ್​ಆಪ್​ ದಿ ಮ್ಯಾಚ್​ ಹೆಗ್ಗಳಿಕೆ ಪಾತ್ರರಾಗಿದ್ದಾರೆ.
ಇದನ್ನೂ ಓದಿ: ರಾಯಚೂರಿನ ಅಭಿಮಾನಿಗೆ ಹೊಡಿಬೇಡಿ ಎಂದಿದ್ದ ಕೊಹ್ಲಿ, ಆದರೂ ಥಳಿಸಿದ ಬಾಡಿಗಾರ್ಡ್ಸ್​
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಭರ್ಜರಿ ಜಯ ಸಾಧಿಸಿದೆ.. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ದುಕೊಂಡಿತ್ತು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 181 ರನ್​ ಕಲೆಹಾಕಿತು.. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡ 153 ರನ್​ಗಳಿಗೆ ಆಲೌಟ್ ಆಗಿದೆ.. ಈ ಮೂಲಕ ತವರಿನಲ್ಲೇ 28 ರನ್​​ಗಳ ಹೀನಾಯ ಸೋಲು ಅನುಭವಿಸಿದೆ.
𝙎𝙃𝙀𝙀𝙍 𝙋𝘼𝘾𝙀! 🔥🔥
Mayank Yadav with an absolute ripper to dismiss Cameron Green 👏
Head to @JioCinema and @StarSportsIndia to watch the match LIVE#TATAIPL | #RCBvLSGpic.twitter.com/sMDrfmlZim— IndianPremierLeague (@IPL) April 2, 2024
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us