/newsfirstlive-kannada/media/post_attachments/wp-content/uploads/2025/07/Dental-Student-Udaipur.jpg)
ರಾಜಸ್ಥಾನದ ಉದಯಪುರಲ್ಲಿ ಡೆಂಟಲ್ ವಿದ್ಯಾರ್ಥಿನಿ ತನ್ನ ಹಾಸ್ಟೆಲ್ನಲ್ಲೇ ನೇಣು ಬಿಗಿದುಕೊಂಡು ಜೀವಬಿಟ್ಟಿದ್ದಾಳೆ. ಶ್ವೇತಾ ಸಿಂಗ್ ಮೃತ ವಿದ್ಯಾರ್ಥಿನಿ. ಜಮ್ಮು ಕಾಶ್ಮೀರ ವಿದ್ಯಾರ್ಥಿನಿ ಡೆಂಟಲ್ ಕೋರ್ಸ್ನ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು.
ಇದನ್ನೂ ಓದಿ: ಆಸೆ ಸೀರಿಯಲ್ನಲ್ಲಿ ಏನಾಗ್ತಿದೆ..? ಮೀನ-ಸೂರ್ಯ, ಮನೋಜ-ರೋಹಿನಿ ರೋಮ್ಯಾನ್ಸ್ ವಿಡಿಯೋ ವೈರಲ್!
ಶ್ವೇತಾ ಸಿಂಗ್ ಆಕೆಯ ಸ್ನೇಹಿತರು ಈ ವಿಚಾರವನ್ನು ಹಾಸ್ಟೆಲ್ ಮ್ಯಾನೇಜ್ಮೆಂಟ್ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಡೆಂಟಲ್ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿದ್ದು, ಇದರಲ್ಲಿ ತನಗೆ ಡೆಂಟಲ್ ಕಾಲೇಜಿನ ಪ್ರಾಧ್ಯಾಪಕರು ಕಿರುಕುಳ ನೀಡುತ್ತಿದ್ದು, ಸಮಯಕ್ಕೆ ಸರಿಯಾಗಿ ಪರೀಕ್ಷೆಗಳನ್ನು ನಡೆಸುತ್ತಿಲ್ಲ ಎಂದು ದೂರಿದ್ದಾರೆ. ಡೆಂಟಲ್ ವಿದ್ಯಾರ್ಥಿನಿ ಶ್ವೇತಾ ಸಿಂಗ್, ಸಾವಿನ ಬಳಿಕ ಉಳಿದ ವಿದ್ಯಾರ್ಥಿಗಳು ಪ್ರಾಧ್ಯಾಪಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.
ಕಾಲೇಜಿನ ಎದುರಿನ ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಪ್ರಾಧ್ಯಾಪಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆಯನ್ನು ಕಾಲೇಜಿನ ನಿರ್ದೇಶಕರು ವಿದ್ಯಾರ್ಥಿಗಳಿಗೆ ನೀಡಿದ್ದಾರೆ. ಆತ್ಮಹತ್ಯೆ ಕೇಸ್ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಆಧಾರದ ಮೇಲೆ ಪೊಲೀಸರು ಸೂಕ್ತ ಕ್ರಮವನ್ನು ಕೈಗೊಳ್ಳುತ್ತಾರೆ. ಈ ಆತ್ಮಹತ್ಯೆಗೆ ಕಾರಣರಾದವನ್ನು ಡೆಂಟಲ್ ಕಾಲೇಜಿನಿಂದಲೇ ವಜಾಗೊಳಿಸುವುದಾಗಿ ಕಾಲೇಜು ನಿರ್ದೇಶಕರು ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದಾರೆ. ವಿದ್ಯಾರ್ಥಿನಿಯ ಪಾರ್ಥೀವ ಶರೀರವನ್ನು ಶವಾಗಾರಕ್ಕೆ ಸಾಗಿಸಲಾಗಿದೆ. ವಿದ್ಯಾರ್ಥಿನಿಯ ಪೋಷಕರು ಬಂದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಸುಖೀರ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ರವೀಂದ್ರ ಚರಣ್ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ