newsfirstkannada.com

‘ಅರಾಮ್ ಅರವಿಂದ್ ಸ್ವಾಮಿ’ಗೆ ಮೆಗಾ ಸ್ಟಾರ್ ಸಾಥ್.. ನೆಚ್ಚಿನ ನಟನನ್ನು ಭೇಟಿ ಮಾಡಿದ ಅನೀಶ್ ತೇಜೇಶ್ವರ್​

Share :

Published January 31, 2024 at 10:55am

Update January 31, 2024 at 10:58am

  ಚಿರಂಜೀವಿ ಅವರನ್ನು ಭೇಟಿ ಮಾಡಿದ ನಟ ಅನೀಶ್

  ಹೈದ್ರಾಬಾದ್ ನಿವಾಸದಲ್ಲಿ ಭೇಟಿ ಮಾಡಿದ ಸ್ಯಾಂಡಲ್​ವುಡ್​ ನಟ

  ‘ಆರಾಮ್ ಅರವಿಂದ ಸ್ವಾಮಿ’ ಕಂಟೆಂಟ್​ ನೋಡಿ ಮೆಚ್ಚಿಕೊಂಡ ಮೆಗಾಸ್ಟಾರ್​​

ಭಾರತದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣ ಪ್ರಶಸ್ತಿಗೆ ಭಜನರಾಗಿರುವ ಮೆಗಾಸ್ಟಾರ್ ಚಿರಂಜೀವಿ ಅವರನ್ನು ನಟ ಅನೀಶ್ ತೇಜೇಶ್ವರ್​ ಭೇಟಿಯಾಗಿದ್ದಾರೆ, ಕಳೆದ ದಿನ ಚಿರು ಹೈದ್ರಾಬಾದ್ ನಿವಾಸದಲ್ಲಿ ಭೇಟಿಯಾಗಿರುವ ಅವರು, ಮೆಗಾಸ್ಟಾರ್ ಗೆ ಶುಭಾಶಯ ತಿಳಿಸಿದ್ದಾರೆ.

ನಟ ಅನೀಶ್ ಇದೇ ವೇಳೆ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ತಮ್ಮ ಬಹುನಿರೀಕ್ಷಿತ ‘ಆರಾಮ್ ಅರವಿಂದ ಸ್ವಾಮಿ’ ಚಿತ್ರದ ಕಂಟೆಂಟ್ ತೋರಿಸಿದ್ದಾರೆ. ಸಿನಿಮಾದ ಕಂಟೆಂಟ್ ನೋಡಿ ಮೆಚ್ಚಿಕೊಂಡ ಚಿರಂಜೀವಿಯವರು ಅನೀಶ್ ಚಿತ್ರಕ್ಕೆ ಬೆಸ್ಟ್ ವಿಷಸ್ ತಿಳಿಸಿದ್ದಾರೆ.

ಮೆಗಾಸ್ಟಾರ್ ಚಿರಂಜೀವಿ ಮತ್ತು ನಟ ಅನೀಶ್

ಅನೀಶ್ ಹುಟ್ಟುಹಬ್ಬದ ಅಂಗವಾಗಿ ಬಿಡುಗಡೆಯಾಗಿದ್ದ ಆರಾಮ್ ಅರವಿಂದ ಸ್ವಾಮಿ ಟೈಟಲ್ ಟ್ರ್ಯಾಕ್ ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಅರ್ಜುನ್ ಜನ್ಯ ಮ್ಯೂಸಿಕ್, ನಾಗಾರ್ಜುನ್ ಶರ್ಮಾ ಸಾಹಿತ್ಯದ ಹಾಡಿಗೆ ಬೊಂಬಾಟ್ ಆಗಿ ಅನೀಶ್ ಕುಣಿದು ಕುಪ್ಪಳಿಸಿದ್ದರು. ಬಾಬಾ ಭಾಸ್ಕರ್ ಮಾಸ್ಟರ್ ಕೊರಿಯೋಗ್ರಾಫಿಯಲ್ಲಿ ಮೂಡಿಬಂದಿದ್ದ ಟೈಟಲ್ ಟ್ರ್ಯಾಕ್ 1 ಕೋಟಿಗೂ ಅಧಿಕ ವೀವ್ಸ್ ಪಡೆದುಕೊಂಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಅರಾಮ್ ಅರವಿಂದ್ ಸ್ವಾಮಿ’ಗೆ ಮೆಗಾ ಸ್ಟಾರ್ ಸಾಥ್.. ನೆಚ್ಚಿನ ನಟನನ್ನು ಭೇಟಿ ಮಾಡಿದ ಅನೀಶ್ ತೇಜೇಶ್ವರ್​

https://newsfirstlive.com/wp-content/uploads/2024/01/Anish.jpg

Load More