/newsfirstlive-kannada/media/post_attachments/wp-content/uploads/2025/04/RAIN-3.jpg)
ಬೆಂಗಳೂರು: ಇಂದಿನಿಂದ ಮುಂದಿನ ಒಂದು ವಾರಗಳ ಕಾಲ ರಾಜ್ಯದಲ್ಲಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಏಪ್ರಿಲ್ 12ರಿಂದ 18ರವರೆಗೆ ರಾಜ್ಯದಲ್ಲಿ ವರುಣ ಆರ್ಭಟಿಸಿದ್ದಾನೆ. ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ವಾಡಿಕೆಗಿಂತ ಹೆಚ್ಚಾಗಿ ಮಳೆ ಸುರಿದಿದೆ.
ಇದನ್ನೂ ಓದಿ: ಬೆಂಗಳೂರಲ್ಲಿ ಐತಿಹಾಸಿಕ ಕರಗ.. ದೇವಿಯ ಮೆರವಣಿಗೆ ಹೇಗಿರುತ್ತೆ..? ಇಂದಿನ ವಿಶೇಷತೆ ಏನು..?
ಈಗಾಗಲೇ 25 ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಿದ್ದು, 3 ಜಿಲ್ಲೆಗಳಲ್ಲಿ ಸಾಮಾನ್ಯ, ಒಂದು ಜಿಲ್ಲೆಯಲ್ಲಿ ಅತಿ ಕಡಿಮೆ ಮತ್ತು ಒಂದು ಜಿಲ್ಲೆಯಲ್ಲಿ ಇನ್ನೂ ಮಳೆಯಾಗಿಲ್ಲ. ವಾಡಿಕೆ ಪ್ರಕಾರ ಏಪ್ರಿಲ್ ಮೊದಲ ವಾರದಲ್ಲಿ 4.7 ಮಿ ಮೀ. ಮಳೆಯಾಗಬೇಕಿತ್ತು. ಆದರೆ ಸದ್ಯ 19.1 ಮಿ ಮೀ. ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ವಾಡಿಕೆಯ ಪ್ರಕಾರ 4.7 ಮಿ.ಮೀ. ಮಳೆಯಾಗಬೇಕಿತ್ತು. 18.1 ಮಿ.ಮೀ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ 3.8 ಮಿ ಮೀ ಮಳೆ ಬದಲಿಗೆ 13.9 ಮಿ ಮೀ ಹಾಗೂ ದಕ್ಷಿಣ ಒಳನಾಡಿನಲ್ಲಿ 5.5 ಮಿ ಮೀ. ಬದಲಿಗೆ 23.8 ಮಿ ಮೀ. ಮಳೆಯಾಗಿದೆ.
ಇನ್ನೂ, ಏಪ್ರಿಲ್ 12 ರಿಂದ 18ರವರೆಗೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಬೆಳಗಾವಿ, ರಾಯಚೂರು, ಹಾವೇರಿ, ಕೊಪ್ಪಳ, ವಿಜಯಪುರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಏಪ್ರಿಲ್ 14 ರಿಂದ 16ರವರೆಗೆ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ