newsfirstkannada.com

ಇಂದು, ನಾಳೆ ಬೆಂಗಳೂರಲ್ಲಿ ವರುಣನ ಅಬ್ಬರ; ರಾಜ್ಯದ ಹಲವೆಡೆ ಹವಾಮಾನ ಇಲಾಖೆಯಿದ ಮಳೆಯ ಅಲರ್ಟ್‌!

Share :

Published August 20, 2024 at 5:43pm

    ಇಂದು ಮತ್ತು ನಾಳೆ 2 ದಿನ ಬೆಂಗಳೂರಿನ ಹಲವೆಡೆ ಭರ್ಜರಿ ಮಳೆ

    ಈ ಜಿಲ್ಲೆಗಳಲ್ಲಿ ಪ್ರತಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ

    ಆಗಸ್ಟ್‌ 22ರಿಂದ ಆಗಸ್ಟ್‌ 24ರವರೆಗೆ ರಾಜ್ಯದಲ್ಲಿ ಮಳೆಗೆ ಬ್ರೇಕ್‌!

ಬೆಂಗಳೂರು: ಇಂದು ಮತ್ತು ನಾಳೆ 2 ದಿನ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭರ್ಜರಿ ಮಳೆಯಾಗುವ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. ಪ್ರಮುಖವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ರಾಜ್ಯ ಹವಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಇಂದು ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯಾಗುತ್ತಿದೆ. ಕರಾವಳಿ ಒಳನಾಡಿನಲ್ಲಿ ಮಾರುತದ ಹಿನ್ನೆಲೆಯಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಕರಾವಳಿಯಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ: ನಾಳೆ ಭಾರತ್ ಬಂದ್.. ಮುಷ್ಕರಕ್ಕೆ ಕಾರಣವೇನು? ಶಾಲೆಗಳಿಗೆ ರಜೆ ಇರುತ್ತಾ? ಏನಿರುತ್ತೆ? ಏನಿರಲ್ಲ? 

ಇಂದು ರಾಜ್ಯದ ಹಲವು ಪ್ರದೇಶಗಳಿಗೆ ಹವಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇಂದು ಹಾಗೂ ನಾಳೆ ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು, ಕೊಡಗು, ಚಿಕ್ಕಬಳ್ಳಾಪುರ ಸೇರಿದಂತೆ ಹಲವಡೆ ಮಳೆಯ ಎಚ್ಚರಿಕೆ ನೀಡಲಾಗಿದೆ.

ಎಲ್ಲೆಲ್ಲಿ ಮಳೆಯ ಎಚ್ಚರಿಕೆ?
ಇಂದು ಮತ್ತು ನಾಳೆ ಎರಡು‌ ದಿನ‌ ರಾಜ್ಯದೆಲ್ಲೆಡೆ ಮಳೆಯ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲೂ ಭಾರೀ ಮಳೆಯಾಗಲಿದೆ. ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇದೆ.

ಮೈಸೂರು, ಮಂಡ್ಯ, ಕೊಡಗು, ಹಾಸನ, ಚಾಮರಾಜನಗರ, ಬೆಳಗಾವಿ, ಬೀದರ್‌, ಧಾರವಾಡ, ಕಲಬುರಗಿ, ವಿಜಯಪುರದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಸಾಧಾರಣ ವರ್ಷಧಾರೆ ಆಗಲಿದೆ. ಕೆಲವು ಜಿಲ್ಲೆಗಳಲ್ಲಿ ಪ್ರತಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎನ್ನಲಾಗಿದೆ.

ಇದನ್ನೂ ಓದಿ: ಸಿಎಂ ಸಿದ್ದು ಬೆನ್ನಲ್ಲೇ HDKಗೂ ಸಂಕಷ್ಟ.. ಪ್ರಾಸಿಕ್ಯೂಷನ್‌ಗೆ ಗವರ್ನರ್​ ಅನುಮತಿ ಕೊಡ್ತಾರಾ?

ಇಂದು ನಾಳೆ ಮಳೆಯಾದ್ರೆ ಆಗಸ್ಟ್‌ 22ರಿಂದ ಆಗಸ್ಟ್‌ 24ರವರೆಗೆ ರಾಜ್ಯದಲ್ಲಿ ಮಳೆ ಇರುವುದಿಲ್ಲ. ಆಗಸ್ಟ್ 25ರಿಂದ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭವಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಇಂದು, ನಾಳೆ ಬೆಂಗಳೂರಲ್ಲಿ ವರುಣನ ಅಬ್ಬರ; ರಾಜ್ಯದ ಹಲವೆಡೆ ಹವಾಮಾನ ಇಲಾಖೆಯಿದ ಮಳೆಯ ಅಲರ್ಟ್‌!

https://newsfirstlive.com/wp-content/uploads/2023/06/Heavy-Rain.jpg

Load More