ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ.. ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಏನು?

author-image
Veena Gangani
Updated On
ಹವಾಮಾನ ಇಲಾಖೆಯಿಂದ ಮತ್ತೆ ಎಚ್ಚರಿಕೆ.. ರಾಜ್ಯದಲ್ಲಿ ಇನ್ನೂ ಎಷ್ಟು ದಿನ ಮಳೆ..?
Advertisment
  • ಯಾವೆಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ ಗೊತ್ತಾ?
  • ಇಂದಿನಿಂದ ರಾಜ್ಯದ ಹಲವೆಡೆ 5 ದಿನಗಳ ಕಾಲ ಭಾರೀ ಮಳೆ
  • ಹವಾಮಾನ ಇಲಾಖೆ ವಿಜ್ಞಾನಿ ಸಿಎಸ್ ಪಾಟೀಲ್ ಹೇಳಿದ್ದೇನು?

ಬೆಂಗಳೂರು: ಒಂದು ಕಡೆ ಬಿಸಿಲು, ಮತ್ತೊಂದು ಕಡೆ ಸಿಲಿಕಾನ್​​ ಸಿಟಿಯಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದೆ. ಇಷ್ಟು ದಿನ ಬಿಸಿ ಗಾಳಿಯಿಂದ ಕಂಗೆಟ್ಟಿದ್ದ ಜನರಿಗೆ ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ಕೊಟ್ಟಿದೆ.

ಇದನ್ನೂ ಓದಿ:ಸೀತಾರಾಮ ತಂಡದಿಂದ ಬಿಗ್​ ಶಾಕ್​.. ವೀಕ್ಷಕರಿಗೆ ಗುಡ್​ ಬೈ ಹೇಳಲು ಮುಂದಾದ ಟಾಪ್ ಸೀರಿಯಲ್

publive-image

ಇಂದಿನಿಂದ ರಾಜ್ಯದ ಹಲವೆಡೆ 5 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದೆ. ಇಂದಿನಿಂದ ಅಂದರೆ ಮೇ 22.ರಿಂದ 27ರ ತನಕ ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಮೇತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

publive-image

ಆದ್ರೆ ಬೆಂಗಳೂರಿನಲ್ಲಿ‌ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಉತ್ತರ ಕನ್ನಡ,ದಕ್ಷಿಣ ಕನ್ನಡ,ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ವಿಜಯಪುರ, ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಮಳೆಯಾಗೋ ಸಾಧ್ಯತೆ ಇದೆ. ಹೀಗಾಗಿ ಈ ಮೇಲಿನ ಜಿಲ್ಲೆಗಳಿಗೆ ಇಂದಿನಿಂದ ಮೆ.26ರವರೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment