/newsfirstlive-kannada/media/post_attachments/wp-content/uploads/2023/11/Chennai-Rain.jpg)
ಬೆಂಗಳೂರು: ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ. ಮಳೆಯ ಜೊತೆಗೆ ಈ ವಾರ ಕೊರೆಯುವ ಚಳಿ ಹಾಗೂ ಶೀತದ ವಾತಾವರಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕಳೆದ ವಾರ ಮೋಡ ಕವಿದ ವಾತಾವರಣವಿತ್ತು. ಈ ವಾರವು ಸಿಲಿಕಾನ್ ಸಿಟಿಯಲ್ಲಿ ಮಳೆಯ ಮುನ್ಸೂಚನೆ ಎದ್ದು ಕಾಣುತ್ತಿದೆ. ಡಿಸೆಂಬರ್ 2ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಮುಂದಿನ 5 ದಿನಗಳ ಕಾಲ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಯಾವ್ಯಾವ ಜಿಲ್ಲೆಯಲ್ಲಿ ಮಳೆ?
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂ. ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us