/newsfirstlive-kannada/media/post_attachments/wp-content/uploads/2025/02/microfinance.jpg)
ರಾಜ್ಯದ ಜನರ ಆಕ್ರೋಶಕ್ಕೆ ಕಾರಣವಾಗಿದ್ದ ಮೈಕ್ರೋ ಫೈನಾನ್ಸ್ ಆಟಾಟೋಪಕ್ಕೆ ಕೊನೆಗೂ ಬ್ರೇಕ್ ಬೀಳೋ ಕಾಲ ಸನಿಹವಾಗಿದೆ. ಸುಗ್ರೀವಾಜ್ಞೆಗೆ ರಾಜ್ಯಪಾಲರ ಸಹಿ ಪಡೆಯೋದ್ರದಲ್ಲಿ ಹಿನ್ನಡೆ ಅನುಭವಿಸಿದ್ದ ರಾಜ್ಯ ಸರ್ಕಾರ ಕೊನೆಗೂ ಎರಡನೇ ಪ್ರಯತ್ನದಲ್ಲಿ ಫಲ ಕಂಡಿದೆ. ಹೊಸ ಕಾನೂನು ಜಾರಿಗೆ ಬಂದಿದೆ.
ಮೈಕ್ರೋ ಫೈನಾನ್ಸ್ ಅಟ್ಟಹಾಸಕ್ಕೆ ಕೊನೆಗೂ ಲಗಾಮು
ಕರ್ನಾಟದಲ್ಲಿ ಮೈಕ್ರೋ ಫೈನಾನ್ಸ್ ಅಟ್ಟಹಾಸಕ್ಕೆ ಕೊನೆಗೂ ಲಗಾಮು ಬಿದ್ದಿದೆ. ಮೈಕ್ರೋ ಫೈನಾನ್ಸ್ ವಿರುದ್ಧದ ಸರ್ಕಾರದ ಅಸ್ತ್ರ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅಂಕಿತ ಹಾಕಿದ್ದಾರೆ. 2ನೇ ಬಾರಿಗೆ ರಾಜ್ಯಪಾಲರಿಗೆ ಸುಗ್ರೀವಾಜ್ಞೆಕರಡು ಕಳುಹಿಸಿ 6 ಅಂಶಗಳ ವಿವರಣೆ ಜೊತೆ ಸ್ಪಷ್ಟನೆ ನೀಡಿದ್ದ ಸರ್ಕಾರ ಕೊನೆಗೂ ರಾಜ್ಯಪಾಲರ ಸಹಿ ಪಡೆಯೋದ್ರಲ್ಲಿ ಸಕ್ಸಸ್ ಆಗಿದೆ. ಅಂಕಿತದ ಜೊತೆಗೆ ಸರ್ಕಾರಕ್ಕೆ ರಾಜ್ಯಪಾಲರು ಹಲವು ಸಲಹೆಗಳನ್ನು ನೀಡಿದ್ದು, ಈ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವಂತೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಇನ್ಮುಂದೆ ವಾಟ್ಸ್ಆ್ಯಪ್ನಲ್ಲೂ ಕಟ್ಟಬಹುದು ದಂಡ; ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡೋರು ಓದಲೇಬೇಕಾದ ಸ್ಟೋರಿ!
ಸರ್ಕಾರಕ್ಕೆ ರಾಜ್ಯಪಾಲರ ಸಲಹೆ!
- RBIಯಡಿ ನೋಂದಣಿಯಾದ ಎಲ್ಲಾ ಬ್ಯಾಂಕ್, ಸಂಸ್ಥೆಗಳು ಇದರಡಿ ಬರಬಾರದು
- ಪ್ರಾಮಾಣಿಕವಾಗಿ ಸಾಲ ಕೊಟ್ಟವರಿಗೆ ಬಡ್ಡಿ ಸಹಿತ ವಸೂಲಿ ಮಾಡುವ ಬಗ್ಗೆ ಮುಂಜಾಗ್ರತೆ
- ಬಾಕಿ ಸಾಲದ ಮೊತ್ತ ಮರುಪಡೆಯಲು ಕಾನೂನು ಹೋರಾಟಕ್ಕೆ ಕಾರಣವಾಗಬಹುದು
- ಪರಿಹಾರಗಳಿಗೆ ಹೋರಾಡುವುದನ್ನ ತಡೆಯುವುದು ಮೂಲಭೂತ ಹಕ್ಕಿನ ಉಲ್ಲಂಘನೆ
- ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಮರುಚಿಂತನೆ ಮಾಡಿ ಸೂಕ್ತ ಕ್ರಮಗಳನ್ನ ಕೈಗೊಳ್ಳಬೇಕು
- ಈ ಅಂಶಗಳ ವಿಧೇಯಕದಲ್ಲಿ ಸೇರಿಸಲು ಕ್ರಮ ಕೈಗೊಳ್ಳಿ, ವಿಧಾನಮಂಡಲದಲ್ಲಿ ಚರ್ಚಿಸಿ
ನಿಮ್ಮ ಜೊತೆ ನಮ್ಮ ಸರ್ಕಾರ ಇದೆ ಎಂದ ಸಿಎಂ
ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕಿರೋ ಬಗ್ಗೆ ಟ್ವೀಟ್ ಮಾಡಿರೋ ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಮೈಕ್ರೋ ಫೈನಾನ್ಸ್‌ಗಳ ನಿಯಮ ಬಾಹಿರ ಸಾಲ ವಸೂಲಿ, ಕಿರುಕುಳಗಳ ವಿರುದ್ಧ ಜನರಿಗೆ ರಕ್ಷಣೆ ನೀಡಲಿದೆ. ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಹೆದರಿ ಯಾರೊಬ್ಬರೂ ದುಡುಕಿನ ನಿರ್ಧಾರ ಕೈಗೊಳ್ಳದಿರಿ. ನಿಮ್ಮ ಜೊತೆ ನಮ್ಮ ಸರ್ಕಾರ ಇದೆ ಎಂದು ಹೇಳಿದ್ದಾರೆ.
ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ವಸೂಲಿಯ ನೆಪದಲ್ಲಿ ಸಾಲ ಪಡೆದವರಿಗೆ ನೀಡುತ್ತಿರುವ ಕಿರುಕುಳವನ್ನು ತಡೆಯಲು ರೂಪಿಸಲಾದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ದೊರೆತಿದೆ. ಈ ಕಾನೂನು ಶೀಘ್ರದಲ್ಲಿ ಜಾರಿಗೆ ಬಂದು ಮೈಕ್ರೋ ಫೈನಾನ್ಸ್‌ಗಳ ನಿಯಮ ಬಾಹಿರ ಸಾಲ ವಸೂಲಿ, ಕಿರುಕುಳಗಳ ವಿರುದ್ಧ ಜನರಿಗೆ ರಕ್ಷಣೆ ನೀಡಲಿದೆ. ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಹೆದರಿ ಯಾರೊಬ್ಬರೂ ದುಡುಕಿನ ನಿರ್ಧಾರ ಕೈಗೊಳ್ಳದಿರಿ.. ನಿಮ್ಮ ಜೊತೆ ನಮ್ಮ ಸರ್ಕಾರ ಇದೆ. ನಾವು ರೂಪಿಸಿದ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ ಅಧ್ಯಾದೇಶ - 2025 ಈ ಕ್ಷಣದಿಂದ ಕಾನೂನಾಗಿ ಜಾರಿಗೆ ಬಂದಿದೆ- ಸಿದ್ದರಾಮಯ್ಯ, ಮುಖ್ಯಮಂತ್ರಿ
ಒಟ್ನಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಮೂಗುದಾರ ಹಾಕುವ ಸರ್ಕಾರದ ಹೆಜ್ಜೆ ಫಲಪ್ರದವಾಗಿದೆ..ಇನ್ನಾದ್ರೂ ಸಾವು-ನೋವು ಕಡಿಮೆಯಾಗುತ್ತಾ ಕಾದುನೋಡಬೇಕು.
ಇದನ್ನೂ ಓದಿ: ನಿಮಗೇನಾದ್ರೂ ನಟಿಸೋ ಆಸೆ ಇದ್ಯಾ? ಪುಟ್ಟಕ್ಕನ ಮಕ್ಕಳು ನಿರ್ದೇಶಕರಿಂದ ವಿಶೇಷ ಆಹ್ವಾನ!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ