newsfirstkannada.com

ಕಾಂಗ್ರೆಸ್​​ ಸರ್ಕಾರಕ್ಕೆ ಮತ್ತೊಂದು ಶಾಕ್​​; 6ನೇ ಗ್ಯಾರಂಟಿ ಜಾರಿಗೆ ಒತ್ತಾಯಿಸಿ ನಾಳೆ ಮುಷ್ಕರ!

Share :

14-09-2023

    6ನೇ ಗ್ಯಾರೆಂಟಿ ಜಾರಿಗೆ ತರುವಂತೆ ಕಾರ್ಯಕರ್ತೆಯರ ಪಟ್ಟು

    ಖಾಸಗಿ ಸಾರಿಗೆ ಮುಷ್ಕರ ಬೆನ್ನಲ್ಲೇ ಸರ್ಕಾರಕ್ಕೆ ಮತ್ತೊಂದು ಶಾಕ್​!

    ಸೆ.15 ಕ್ಕೆ ಪ್ರತಿಭಟನೆ ಮಾಡಲು ಕಾರ್ಯಕರ್ತೆಯರ ನಿರ್ಧಾರ..!

ಬೆಂಗಳೂರು: ಚುನಾವಣೆಗೂ ಮುನ್ನ ಕಾಂಗ್ರೆಸ್​ ಗ್ಯಾರೆಂಟಿ ಘೋಷಣೆ ಮಾಡಿತ್ತು. ಅದ್ರಲ್ಲಿ ಐದಕ್ಕೆ ಐದನ್ನೂ ಜನರಿಗೆ ಒದಗಿಸುವಲ್ಲಿ ಯಶಸ್ವಿಯಾಗಿರೋ ಸರ್ಕಾರ. ತಾವೇ ಘೋಷಿಸಿದ್ದ 6ನೇ ಯೋಜನೆ ಮರೆತುಬಿಟ್ಟಿದೆ ಅಂತ ಅಂಗನವಾಡಿ ಕಾರ್ಯಕರ್ತೆಯರು ಕೆರಳಿದ್ದಾರೆ.

ಖಾಸಗಿ ಸಾರಿಗೆ ಪ್ರತಿಭಟನೆ ಬಳಿಕ ಕಾಂಗ್ರೆಸ್​ ಸರ್ಕಾರಕ್ಕೆ ಈಗ ಮತ್ತೊಂದು ಸಂಕಷ್ಟ ಎದುರಾಗಲಿದೆ. ಸರ್ಕಾರ ಅಧಿಕಾರಕ್ಕೆ ಬರೋದಕ್ಕೂ ಮುನ್ನ ನಮಗೆ ನೀಡಿದ್ದ ಭರವಸೆಗಳನ್ನ ಈಡೇರಿಸಿಲ್ಲ ಅಂತಾ ಅಂಗನವಾಡಿ ಕಾರ್ಯಕರ್ತೆಯರು ಕಾಂಗ್ರೆಸ್​ ಸರ್ಕಾರದ ವಿರುದ್ಧ ನಿಗಿ ನಿಗಿ ಕೆಂಡಕಾರಿದ್ದಾರೆ. ಸರ್ಕಾರ 6ನೇ ಯೋಜನೆಯನ್ನ ಜಾರಿಗೆ ತರಲೇಬೇಕು ಒಂದು ವೇಳೆ ಯೋಜನೆ ಜಾರಿ ಮಾಡದೇ ಇದ್ದಲ್ಲಿ ಸೆಪ್ಟೆಂಬರ್​ 15ರಂದು ಮುಷ್ಕರ ಮಾಡೋದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಏನಿದು 6ನೇ ಗ್ಯಾರಂಟಿ?

ಚುನಾವಣೆಗೂ ಮುನ್ನ ಕಾಂಗ್ರೆಸ್​​ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳದ ಬಗ್ಗೆ ಭರವಸೆ ನೀಡಿತ್ತು. ಅಂಗನವಾಡಿ ಕಾರ್ಯಕರ್ತೆಯರಿಗೆ ₹15 ಸಾವಿರ ಗೌರವ ಧನ ಹೆಚ್ಚಳ, ಹಾಗೂ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ₹10 ಸಾವಿರ ಗೌರವಧನ ಹೆಚ್ಚಳ ಮಾಡೋದಾಗಿ ಭರವಸೆ ನೀಡಿತ್ತು. ಹಾಗೂ ಸೇವಾ ನಿವೃತ್ತಿ ಹೊಂದಿದರೆ ಅಥವಾ ನಿಧನರಾದರೆ, 3 ಲಕ್ಷ ರೂಪಾಯಿ ಅಂತೆಯೇ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 2 ಲಕ್ಷ ರೂ ಹಣ ನೀಡೋದಾಗಿ ಆಶ್ವಾಸನೆ ನೀಡಿತ್ತು. ಈ ಬಗ್ಗೆ ಸ್ವತಃ ಕಾಂಗ್ರೆಸ್​ ನಾಯಕಿ ಪ್ರಿಯಾಂಕ ಗಾಂಧಿ ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಹೇಳಿದ್ರು. ಆದ್ರೆ ಈಗ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಒಂದು ವೇಳೆ ನಮ್ಮ ಬೇಡಿಕೆಯನ್ನ ಸರ್ಕಾರ ಪೂರೈಸದೆ ಇದ್ದಲ್ಲಿ ಪ್ರತಿಭಟನೆ ಮಾಡೋದಾಗಿ ಎಚ್ಚರಿಕೆ ನೀಡಿದ್ದಾರೆ.

ಸಮರ ಯಾಕೆ?

ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. 262 ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಪ್ರಾರಂಭದ ಬಗ್ಗೆ ಇಲಾಖೆ ಸುತ್ತೋಲೆ ಹೊರಡಿಸಿದೆ. ಶಿಕ್ಷಣ ಇಲಾಖೆಯ ಈ ನಿರ್ಧಾರದ ಬಗ್ಗೆ ಕಾರ್ಯಕರ್ತೆಯರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಇನ್ನೂ ನರೇಗಾ ಯೋಜನೆಯಡಿ ಶಿಶುಪಾಲನ ಕೇಂದ್ರಗಳನ್ನ ಪ್ರಾರಂಭಿಸಲು ಶಿಕ್ಷಣ ಇಲಾಖೆ ಪ್ಲಾನ್​ ರೂಪಿಸಿದೆ. ಸದ್ಯ ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರು ಕಿಡಿಕಾರಿದ್ದು, ಸೆಪ್ಟೆಂಬರ್ 15ರಂದು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ನಿರ್ಧಾರಿಸಿದ್ದಾರೆ.

ಒಟ್ನಲ್ಲಿ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ಮುಂದಾಗಿರೋದು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರ ಇವರ ಬಗ್ಗೆ ಕೂಡ ಚಿಂತಿಸಿ ಒಂದೊಳ್ಳೆ ಯೋಜನೆ ಜಾರಿಗೆ ತರುವ ಅನಿವಾರ್ಯತೆ ಇದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಾಂಗ್ರೆಸ್​​ ಸರ್ಕಾರಕ್ಕೆ ಮತ್ತೊಂದು ಶಾಕ್​​; 6ನೇ ಗ್ಯಾರಂಟಿ ಜಾರಿಗೆ ಒತ್ತಾಯಿಸಿ ನಾಳೆ ಮುಷ್ಕರ!

https://newsfirstlive.com/wp-content/uploads/2023/07/CM_SIDDARAMAIAH.jpg

Load More