/newsfirstlive-kannada/media/post_attachments/wp-content/uploads/2024/09/helicopter-2.jpg)
ಕೋಲಾರದ ಬಂಗಾರಪೇಟೆ ತಾಲ್ಲೂಕಿನ ಕರಪನಹಳ್ಳಿ ಗ್ರಾಮದ ಕೆರೆಯಲ್ಲಿ ಸೇನಾ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶಗೊಂಡ ಘಟನೆ ನಡೆದಿದೆ. ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ನಿನ್ನೆ ಸಂಜೆ 4 ಗಂಟೆಗೆ ತುರ್ತು ಭೂ ಸ್ಪರ್ಶ ಮಾಡಲಾಗಿದೆ.
ವಾಯುಸೇನಾ ಹೆಲಿಕಾಪ್ಟರ್ ಯಲಹಂಕದಿಂದ ಚೆನ್ನೈಗೆ ತೆರಳುತ್ತಿತ್ತು. ಆಕಾಶದಲ್ಲಿ ಹಾರುತ್ತಿದ್ದ ವೇಳೆ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ತುರ್ತು ಭೂ ಸ್ಪರ್ಶ ಮಾಡಲಾಗಿದೆ.
ಇದನ್ನೂ ಓದಿ: ಇಂದು ದರ್ಶನ್​​ ಸೇರಿ 5 ಜನ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ.. ಮಹತ್ವದ ಬದಲಾವಣೆ ಆಗುತ್ತಾ?
ಮಹಿಳಾ ಪೈಲಟ್ ಸೇರಿದಂತೆ ಇಬ್ಬರು ಹೆಲಿಕಾಪ್ಟರ್​ನಲ್ಲಿದ್ದು, ಸದ್ಯ ಸುರಕ್ಷಿತವಾಗಿದ್ದಾರೆ. ರಾತ್ರಿ 10 ಗಂಟೆ ನಂತರ ತಾಂತ್ರಿಕ ದೋಷ ನಿವಾರಣೆಗೆ ಅಧಿಕಾರಿಗಳು ಮುಂದಾಗಿದ್ದಾರೆ. ಸೇನಾ ಹೆಲಿಕಾಪ್ಟರ್​​ ತುರ್ತು ಭೂ ಸ್ಪರ್ಶ ಹಿನ್ನೆಲೆ ಮತ್ತೊಂದು ಹೆಲಿಕಾಪ್ಟರ್ ಸ್ಥಳಕ್ಕೆ ಬಂದಿದೆ. ವಾಯುಸೇನೆಯ ಮೆಕ್ಯಾನಿಕ್ಸ್ ಕೂಡ ಸ್ಥಳಕ್ಕೆ ಬಂದಿಳಿದಿದ್ದಾರೆ. ತಾಂತ್ರಿಕ ದೋಷ ಸರಿಪಡಿಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us