ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದ ಜನ
ರಾಜ್ಯದ ಜನತೆಗೆ ಮತ್ತೊಂದು ಶಾಕಿಂಗ್ ನ್ಯೂಸ್
ತರಕಾರಿ ಬೆನ್ನಲ್ಲೇ ಪ್ರತೀ ಲೀಟರ್ ಹಾಲಿಗೆ 3 ರೂ. ಏರಿಕೆ
ಬೆಂಗಳೂರು: ತರಕಾರಿ ಬೆಲೆ ಏರಿಕೆಯಿಂದ ತತ್ತರಿಸಿದ ಹೋಗಿರೋ ರಾಜ್ಯದ ಜನತೆಗೆ ಮತ್ತೊಂದು ಶಾಕಿಂಗ್ ನ್ಯೂಸ್ ಇದೆ. ಇನ್ನು ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಹಾಲಿನ ದರ ಏರಿಕೆ ಬಗ್ಗೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆದಿದೆ. ಈ ಸಭೆಯಲ್ಲಿ ಹಾಲಿನ ದರ ಏರಿಕೆಗೆ ಒಮ್ಮತದ ಒಪ್ಪಿಗೆ ಸಿಕ್ಕಿದೆ. ಹೀಗಾಗಿ ಮುಂದಿನ ತಿಂಗಳು ಆಗಸ್ಟ್ 1ನೇ ತಾರೀಕಿನಿಂದಲೇ ಪರಿಷ್ಕೃತ ಹಾಲಿನ ದರ ಚಾಲ್ತಿಗೆ ಬರಲಿದೆ.
ಇನ್ನು, ಪ್ರತಿ ಲೀಟರ್ಗೆ 5ರೂ ಹೆಚ್ಚಳ ಮಾಡುವಂತೆ ಒಕ್ಕೂಟಗಳಿಂದ ಕೆಎಂಎಫ್ಗೆ ಮನವಿ ಮಾಡಲಾಗಿತ್ತು. ಹೀಗಾಗಿ ಉತ್ಪಾದಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದರ ಏರಿಕೆಗೆ ಕೆಎಂಎಫ್ ಬೋರ್ಡ್ ಸಮ್ಮತಿ ನೀಡಿತ್ತು. ಈ ಬಗ್ಗೆ ಸಿಎಂ ಜೊತೆ ಸಭೆ ನಡೆಸಿದ ಕೆಎಂಎಫ್ ಅಧಿಕಾರಿಗಳು ಹಾಲಿನ ದರ ಲೀಟರ್ಗೆ 5. ರೂ ಹೆಚ್ಚಳಕ್ಕೆ ಪ್ರಸ್ತಾಪ ಇಡಲಾಗಿತ್ತು. ಆದರೆ, ಕೊನೆಗೆ 3 ರೂ. ಏರಿಕೆಗೆ ಸಿಎಂ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಇನ್ನು, ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ, ಹಾಲು ಒಕ್ಕೂಟವು 5 ರೂಪಾಯಿ ಹೆಚ್ಚಳಕ್ಕೆ ಸರ್ಕಾರದ ಮುಂದೆ ಬೇಡಿಕೆ ಇಟ್ಟಿತ್ತು. ನಾವು ಚರ್ಚೆ ಮಾಡಿದಾಗ ಸಿಎಂ ಸಿದ್ದರಾಮಯ್ಯ 3 ರೂ. ಹೆಚ್ಚಳಕ್ಕೆ ಒಪ್ಪಿಗೆ ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ