ಹಾಲಿನ ವಾಹನಕ್ಕೆ ಡಿಕ್ಕಿ ಹೊಡೆದ ಎರಡು ದ್ವಿಚಕ್ರ ವಾಹನ; ಓರ್ವ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ

author-image
AS Harshith
Updated On
ಹಾಲಿನ ವಾಹನಕ್ಕೆ ಡಿಕ್ಕಿ ಹೊಡೆದ ಎರಡು ದ್ವಿಚಕ್ರ ವಾಹನ; ಓರ್ವ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ
Advertisment
  • ಟಾಟಾ ಏಸ್ ವಾಹನಕ್ಕೆ ಡಿಕ್ಕಿ ಹೊಡೆದ ಎರಡು ದ್ವಿಚಕ್ರ ವಾಹನ
  • ಅಪಘಾತದಲ್ಲಿ ಪಕ್ಕದ ಕಾಲುವೆಗೆ ಉರುಳಿ ಬಿದ್ದ ಹಾಲಿನ ವಾಹನ
  • ಈ ಅಪಘಾತ ನಡೆದಿದ್ದೆಲ್ಲಿ? ಅಷ್ಟಕ್ಕೂ ಆಗಿದ್ದೇನು? ಇಲ್ಲಿದೆ ಮಾಹಿತಿ

ಚಿಕ್ಕಬಳ್ಳಾಪುರ: ಹಾಲಿನ ಕ್ಯಾನ್ ಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಟಾಟಾ ಏಸ್ ವಾಹನಕ್ಕೆ ಎರಡು ದ್ವಿಚಕ್ರ ವಾಹನಗಳು ಡಿಕ್ಕಿ ಹೊಡೆದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ತಾಲ್ಲೂಕಿನ ಪುಲಗಲ್ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಪವನ್ (25) ಮೃತ ಬೈಕ್ ಸವಾರ. ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನ ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಎರಡು ದ್ವಿಚಕ್ರ ವಾಹನಗಳು ಜಖಂಗೊಂಡಿವೆ.

publive-image

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಹರಿದ ನೆತ್ತರು.. ಮಲಗಿದ್ದ 20 ವರ್ಷದ ಯುವತಿಗೆ ಚಾಕು ಇರಿದು ಕೊಲೆ

ಅಪಘಾತದಲ್ಲಿ ಟಾಟಾ ಏಸ್ ರಸ್ತೆ ಪಕ್ಕದ ಕಾಲುವೆಗೆ ಉರುಳಿ ಬಿದ್ದಿದೆ. ಚೇಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment