/newsfirstlive-kannada/media/post_attachments/wp-content/uploads/2024/10/SCO.jpg)
SCO ಶೃಂಗಸಭೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಪಾಕಿಸ್ತಾನದ ಬಲೂಚಿಸ್ತಾನ್‌ನಲ್ಲಿ ಭೀಕರ ದಾಳಿ ನಡೆದಿದ್ದು 20 ಜನರು ಸಾವನ್ನಪ್ಪಿ 7 ಮಂದಿ ಗಾಯಗೊಂಡಿದ್ದಾರೆ. ಗುರುವಾರ ತಡರಾತ್ರಿ ದುಕಿ ಜಿಲ್ಲೆಯ ಕಲ್ಲಿದ್ದಲು ಗಣಿ ಬಳಿ ಇರುವ ನಿವಾಸಗಳ ಮೇಲೆ ಬಂದೂಕುಧಾರಿಗಳು ದಾಳಿ ನಡೆಸಿದ್ದಾರೆ.
ಬಂದೂಕುಧಾರಿಗಳು ವಸತಿ ಪ್ರದೇಶವನ್ನು ಎಲ್ಲಾ ಕಡೆಯಿಂದ ಸುತ್ತುವರೆದು ಗುಂಡು ಹಾರಿಸಿದ್ದಾರೆ. ಇಲ್ಲಿದ್ದವರೆಲ್ಲ ಬಲೂಚಿಸ್ತಾನದ ಪಶ್ತೂನ್ ಪ್ರದೇಶಗಳಿಂದ ವಲಸೆ ಬಂದಿದ್ದರು. ಮೃತರಲ್ಲಿ ಮೂವರು ಅಫ್ಘಾನ್​​ ಮೂಲದವರು. ಸದ್ಯ ಯಾವುದೇ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿಲ್ಲ.
/newsfirstlive-kannada/media/post_attachments/wp-content/uploads/2024/10/PAKISTHAN.jpg)
ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹಲವರನ್ನು ಕೊಂದಿದ್ದಾರೆ. ಶಸ್ತ್ರಸಜ್ಜಿತ ದಾಳಿಕೋರರು ಸ್ಥಳದಿಂದ ಪಲಾಯನ ಮಾಡುವ ಮೊದಲು ಗಣಿ ಮತ್ತು ಯಂತ್ರೋಪಕರಣಗಳಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ. ಪೊಲೀಸರ ವಾಹನದ ಮೇಲೆ ದಾಳಿ ಮಾಡಿದ್ದಾರೆ.
ಪಾಕಿಸ್ತಾನದ ಇಸ್ಲಾಮಾಬಾದ್​ನಲ್ಲಿ ಅಕ್ಟೋಬರ್ 15-16 ರಂದು SCO ಶೃಂಗಸಭೆ ನಡೆಯಲಿದೆ. ಈ ಸಭೆಗೆ ಭಾರತವೂ ಸೇರಿದಂತೆ ಎಲ್ಲಾ ಎಸ್​ಸಿಒ ಸದಸ್ಯ ರಾಷ್ಟ್ರಗಳು ಬರಲಿವೆ. ಇದೀಗ ಪಾಕಿಸ್ತಾನದಲ್ಲಿ ಮಾರಣಾಂತಿಕ ದಾಳಿ ನಡೆದಿರೋದು ಶೃಂಗಸಭೆಗೆ ಆತಂಕ ಎದುರಾಗಿದೆ. ಅಲ್ಲದೇ ಭಯೋತ್ಪಾದನೆಗೆ ಪ್ರೋತ್ಸಾಹ ನೀಡಿಕೊಂಡು ಬರುತ್ತಿರುವ ಪಾಕಿಸ್ತಾನದ ವಿರುದ್ಧ ಶೃಂಗಸಭೆಯಲ್ಲಿ ಧ್ವನಿ ಎದ್ದರೂ ಅಚ್ಚರಿ ಇಲ್ಲ.
ಇದನ್ನೂ ಓದಿ:‘ನಾನು ಯಾಕೆ ಪಾಕಿಸ್ತಾನಕ್ಕೆ ಹೋಗ್ತಿದ್ದೀನಿ ಎಂದರೆ..’ ಸಚಿವ ಜೈಶಂಕರ್ ಹೇಳಿದ್ದೇನು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us