/newsfirstlive-kannada/media/post_attachments/wp-content/uploads/2024/07/bus-Accident-3.jpg)
ಮಿನಿ ಬಸ್​ ಪಲ್ಟಿ ಹೊಡೆದಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ. ಬಸ್​ನಲ್ಲಿ 40ಕ್ಕೂ ಹೆಚ್ಚು ಶಾಲಾ ಮಕ್ಕಳಿದ್ದರು ಎಂದು ತಿಳಿದುಬಂದಿದೆ.
ಹರಿಯಾಣದಲ್ಲಿ ಈ ದುರ್ಘಟನೆ ನಡೆದಿದೆ. ಪಿಂಜೋರ್​ ಬಳಿ ಬಸ್​ ಅಪಘಾತಕ್ಕೀಡಾಗಿದೆ. ಓವರ್​ಲೋಡ್​ ಕಾರಣಕ್ಕೆ ಬಸ್​ ಪಲ್ಟಿ ಹೊಡೆದಿದೆ ಎನ್ನಲಾಗುತ್ತಿದೆ.
ಮಿನಿ ಬಸ್​ ತಿರುವಿನಲ್ಲಿ ಪಲ್ಟಿ ಹೊಡೆದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಅಪಘಾತದ ಕುರಿತು ತನಿಖೆ ನಡೆಸುತ್ತಿದ್ದಾರೆ.
ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾರಿಗೂ ಗಂಭೀರವಾಗಿ ಗಾಯವಾಗಿಲ್ಲ ಎಂದು ತಿಳಿದುಬಂದಿದೆ. ಪಂಚಕುಲದ ಆಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಲ್ಲಿ ನಾಲ್ವರು ವಯಸ್ಕರಿದ್ದು, ಅದರಲ್ಲಿ ಓರ್ವ ಮಹಿಳೆಯು ಸೇರಿದ್ದಾರೆ.
ಇದನ್ನೂ ಓದಿ: ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ.. ಹಾಸ್ಟೆಲ್​ನಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆ
60 ವರ್ಷ ವಯಸ್ಸಿನ ಮಹಿಳೆಯ ತೋಳಿಗೆ ಗಂಭೀರವಾಗಿ ಗಾಯವಾಗಿದ್ದು, ಅವರನ್ನು ಚಂಡಿಗಢದ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us