newsfirstkannada.com

ರಕ್ಷಾ ರಾಮಯ್ಯ ಗೆಲುವಿಗೆ ಕೈ ಜೋಡಿಸಿದ ಕೆ.ಹೆಚ್‌ ಮುನಿಯಪ್ಪ; ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್‌ ಭರ್ಜರಿ ಪ್ರಚಾರ

Share :

Published April 16, 2024 at 4:40pm

  ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪರ ಕೆ.ಹೆಚ್ ಮುನಿಯಪ್ಪ ಪ್ರಚಾರ

  ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್‌ ಅವರಿಗೆ ಟಾಂಗ್ ಕೊಟ್ಟ ಮುನಿಯಪ್ಪ

  ಮೋದಿಯವರ ಆಗಮನದಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ತೊಂದರೆ ಇಲ್ಲ

ಚಿಕ್ಕಬಳ್ಳಾಪುರದಲ್ಲಿ ಲೋಕಸಭಾ ಚುನಾವಣೆಯ ಪ್ರಚಾರ ರಂಗೇರಿದೆ. ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರು ಕ್ಷೇತ್ರದಾದ್ಯಂತ ಭರ್ಜರಿ ಮತಯಾಚನೆ ಮಾಡುತ್ತಿದ್ದಾರೆ. ರಕ್ಷಾ ರಾಮಯ್ಯ ಪರ ಸಚಿವ ಕೆ.ಹೆಚ್‌ ಮುನಿಯಪ್ಪ ಅವರು ಅಖಾಡಕ್ಕಿಳಿದು ಕ್ಷೇತ್ರದಲ್ಲಿ ಮಿಂಚಿನ ಸಂಚಾರ ನಡೆಸುತ್ತಿದ್ದಾರೆ.

ಚಿಕ್ಕಬಳ್ಳಾಪುರ ಲೋಕಸಭಾ ವ್ಯಾಪ್ತಿಯ ತೂಬಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪರ ಸಚಿವ ಕೆ.ಹೆಚ್ ಮುನಿಯಪ್ಪ ಪ್ರಚಾರ ಸಭೆ ನಡೆಸಿದರು. ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು, ಕೆ.ಹೆಚ್ ಮುನಿಯಪ್ಪ ಹಾಗು ರಕ್ಷಾ ರಾಮಯ್ಯರಿಗೆ ಬೃಹತ್ ಸೇಬಿನ ಹಾರ ಹಾಕಿ ಭರ್ಜರಿ ಸ್ವಾಗತ ಕೋರಿದರು. ಮಹಿಳಾ ಮಣಿಗಳು ಕಳಸ ಹೊತ್ತು ಅದ್ಧೂರಿ ಸ್ವಾಗತ ಕೋರಿದರು. ಈ ವೇಳೆ, ಇತಿಹಾಸ ಪ್ರಸಿದ್ಧ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ರಕ್ಷಾ ರಾಮಯ್ಯ ಅವರು ಪ್ರಚಾರ ಸಭೆ ಆರಂಭಿಸಿದರು.

ಇದನ್ನೂ ಓದಿ: ಗೆಲ್ಲಿಸಮ್ಮ ಚೌಡೇಶ್ವರಿ.. ಕೊಂಡ ಹಾಯ್ದು ಪ್ರಾರ್ಥಿಸಿದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ!

ರಕ್ಷಾ ರಾಮಯ್ಯ ಪರ ಪ್ರಚಾರ ನಡೆಸಿದ ಸಚಿವ ಕೆ.ಹೆಚ್‌ ಮುನಿಯಪ್ಪ, ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್‌ ಅವರ ಆರೋಪಕ್ಕೆ ತಿರುಗೇಟು ನೀಡಿದರು. ಡಾ.ಕೆ ಸುಧಾಕರ್ ಅವರು ರಕ್ಷಾ ರಾಮಯ್ಯ ಅವರಿಗೆ ಕಾಂಗ್ರೆಸ್ ಪಕ್ಷ ಹಣ ನೋಡಿ ಟಿಕೆಟ್ ನೀಡಿದೆ ಎಂದಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಕೆ.ಹೆಚ್‌ ಮುನಿಯಪ್ಪ ಅವರು ನಾನು ಸುಧಾಕರ್ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ರಕ್ಷಾ ರಾಮಯ್ಯನವರ ಕುಟುಂಬ ಸಮಾಜಕ್ಕೆ ಸಾಕಷ್ಟು ಕೊಡುಗೆ ನೀಡಿದೆ. ರಾಮಯ್ಯ ವಿದ್ಯಾಸಂಸ್ಥೆಯಿಂದ ಸಾಕಷ್ಟು ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ರಕ್ಷಾ ರಾಮಯ್ಯನವರ ಕುಟುಂಬಕ್ಕೆ ದೇವರ ಆಶೀರ್ವಾದ ಇದೆ ಒಳ್ಳೆಯದಾಗುತ್ತೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ರಕ್ಷಾ ರಾಮಯ್ಯ ಗೆಲುವಿಗೆ ಕಾಂಗ್ರೆಸ್‌ ಘಟಾನುಘಟಿ ನಾಯಕರ ಮಾಸ್ಟರ್ ಪ್ಲಾನ್; ಏನದು?

ಇದೇ ವೇಳೆ, ಕರ್ನಾಟಕಕ್ಕೆ ನರೇಂದ್ರ ಮೋದಿಯವರ ಆಗಮನದಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ತೊಂದರೆ ಇಲ್ಲ. ರಾಜ್ಯದಲ್ಲಿ ನಾವು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಬಡವರಿಗೆ, ರೈತರಿಗೆ ಎಲ್ಲಾ ವರ್ಗದ ಜನರಿಗೆ ನಮ್ಮ ಸರ್ಕಾರ ಸಹಾಯ ಮಾಡಿದೆ. ರಾಜ್ಯದಲ್ಲಿ ಕೆಲಸ ಮಾಡಿದ್ದೇವೆ ಜನರು ನಮಗೆ ಆಶೀರ್ವಾದ ಮಾಡುತ್ತಾರೆ ಎಂದು ಮುನಿಯಪ್ಪ ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಕ್ಷಾ ರಾಮಯ್ಯ ಗೆಲುವಿಗೆ ಕೈ ಜೋಡಿಸಿದ ಕೆ.ಹೆಚ್‌ ಮುನಿಯಪ್ಪ; ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್‌ ಭರ್ಜರಿ ಪ್ರಚಾರ

https://newsfirstlive.com/wp-content/uploads/2024/04/Rakshya-Ramaiah-Kh-Muniyappa.jpg

Load More